×
Ad

ಕಲಬುರಗಿ ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ : ಬಿಜೆಪಿ ‌ನಾಯಕ ಎನ್.ರವಿಕುಮಾರ್ ವಿರುದ್ಧ ಪ್ರಕರಣ ದಾಖಲು

Update: 2025-05-26 17:57 IST

ಎನ್.ರವಿಕುಮಾರ್

ಕಲಬುರಗಿ : ಕಲಬುರಗಿ ಜಿಲ್ಲಾಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇರೆಗೆ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ವಿರುದ್ಧ ನಗರದ ಸ್ಟೇಶನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.

ಶರಣ ಸಿರಸಗಿ ನಿವಾಸಿ ದತ್ತಾತ್ರೇಯ ಇಲ್ಕಳಕಿ ಅವರ ದೂರಿನ ಮೇರೆಗೆ ಸ್ಟೇಶನ್ ಬಜಾರ್ ಪೊಲೀಸರು ಎನ್.ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ

"ಜಿಲ್ಲಾಧಿಕಾರಿ (ಫೌಝಿಯಾ ತರನ್ನುಮ್) ಅವರು ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಆಫೀಸರ್ ಆಗಿದ್ದಾರೋ ಗೊತ್ತಿಲ್ಲ ನನಗೆ. ಬಹುಶಃ ನಿಮ್ಮ ಚಪ್ಪಾಳೆ ನೋಡಿದರೆ ಡಿಸಿ ಅವರು ಪಾಕಿಸ್ತಾನದಿಂದ ಬಂದಿರುವಂತೆ ಕಾಣಿಸುತ್ತದೆ" ಎಂದು ಎನ್.ರವಿಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಈಗ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಕಾರ್ಯಕ್ರಮದ ರ್‍ಯಾಲಿಯಲ್ಲಿ ದಲಿತ ಸಮುದಾಯದ ಎಎಸ್‌ಪಿ ಮಹೇಶ್ ಮೇಘಣ್ಣವರ್, ಡಿವೈಎಸ್ಪಿ ಶಂಕರಗೌಡ ಪಾಟೀಲ್ ಹಾಗೂ ಸಿಪಿಐ ಚಂದ್ರಶೇಖರ ವಿರುದ್ಧ ನಿಂದನಾತ್ಮಕ ಹೇಳಿಕೆಗಳನ್ನು ನೀಡಿರುವ ಆರೋಪವೂ ಕೇಳಿಬಂದಿದೆ. ಅಲ್ಲದೇ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಪರಿಶಿಷ್ಟ ಜಾತಿ(ಎಸ್ಸಿ) ಸಮುದಾಯವನ್ನು ಅವಹೇಳನ ಮಾಡಿರುವ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತಂತೆ ಸ್ಟೇಷನ್ ಬಜಾರ್ ಪೊಲೀಸರು ಜಾತಿ ನಿಂದನಾ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News