Kalaburagi | ಸಚಿವ ಪ್ರಿಯಾಂಕ್ ಖರ್ಗೆಗೆ ಅವಾಚ್ಯ ಪದಗಳಿಂದ ನಿಂದನೆ ಆರೋಪ; ಮರುಳಾರಾಧ್ಯ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲು
ಅಫಜಲಪುರ : ರೈತರ ಹೋರಾಟದ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಅಫಜಲಪುರ ತಾಲೂಕಿನ ಮಾಶಾಳ ಸಿದ್ದಲಿಂಗೇಶ್ವರ ವಿರಕ್ತಮಠದ ಮರುಳಾರಾಧ್ಯ ಸ್ವಾಮೀಜಿ ವಿರುದ್ಧ ದೇವಲ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ.5ರಂದು ಚೌಡಾಪುರದಲ್ಲಿ ರೈತರು ನಡೆಸುತ್ತಿದ್ದ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ್ದ ಸ್ವಾಮೀಜಿ, ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉದ್ದೇಶಿಸಿ ಆಕ್ಷೇಪಾರ್ಹ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ರೈತರ ಸಮಸ್ಯೆಗಳಿಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರವಾಗಿ ಪ್ರತಿಕ್ರಿಯಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಕುರಿತು ದೂರು ಸ್ವೀಕರಿಸಿರುವ ದೇವಲ ಗಾಣಗಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.