×
Ad

ಕಲಬುರಗಿ: ಅಕ್ರಮ ಸಾರಾಯಿ ಮಾರಾಟ ವಿರೋಧಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ ಪ್ರಕರಣ ದಾಖಲು

Update: 2025-06-13 20:19 IST

ಕಲಬುರಗಿ: ಅಕ್ರಮ ಸಾರಾಯಿ ಮಾರಾಟ ವಿರೋಧಿಸಿ ಪ್ರತಿಭಟನೆ ನಡೆಸಿದ ಮಹಿಳೆಯರು ಸೇರಿದಂತೆ 15-20 ಜನರ ವಿರುದ್ಧ ಅಬಕಾರಿ ಅಧಿಕಾರಿಗಳು ಪ್ರಕರಣ ದಾಖಲಿಸಿರುವ ಘಟನೆ ಜೇವರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಜೂನ್ 4 ರಂದು ಜೇವರ್ಗಿ ವಲಯದ ಅಬಕಾರಿ ನಿರೀಕ್ಷಕರ ಕಚೇರಿಗೆ ಬೀಗ ಹಾಕಿ, ಮುಖ್ಯದ್ವಾರದ ಜಾಲರಿ ಮುರಿದು ಅಬಕಾರಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದಕ್ಕೆ ಹೋರಾಟಗಾರರ ವಿರುದ್ಧ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ನಮ್ಮ ಕರ್ನಾಟಕ ಸೇನೆಯ ಶಿವಲಿಂಗ ಹಳ್ಳಿ, ಸುಧೀಂದ್ರ ಇಜೇರಿ, ಭಗವಂತರಾಯ್, ಸುಮಂಗಲಾ ಭಂಕುರ್ ಸೇರಿದಂತೆ 15-20 ಜನರ ವಿರುದ್ದ ಅಬಕಾರಿ ಅಧಿಕಾರಿಗಳು ದೂರು ದಾಖಲಿಸಿದ್ದರು. ಈ ಸಂಬಂಧ ಎಫ್‌ ಐಆರ್‌ ದಾಖಲಾಗಿದೆ. 

ಜೇವರ್ಗಿ ಮತ್ತು ಯಡ್ರಾಮಿ ತಾಲ್ಲೂಕು ವ್ಯಾಪ್ತಿಯ ಗ್ರಾಮಗಳ ಫಾನ್ ಶಾಪ್, ಕಿರಾಣಿ ಅಂಗಡಿ, ಧಾಬಾಗಳಲ್ಲಿ ಆಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ. ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ರೀತಿ ಕ್ರಮಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ 30ಕ್ಕೂ ಹೆಚ್ಚು ಮಂದಿ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆ ವೇಳೆ ಕೈಯಲ್ಲಿ ಪೊರಕೆ ಮತ್ತು ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಈ ಸಂದರ್ಭದಲ್ಲಿ ಮಹಿಳೆಯೊಬ್ಬರು ಅಬಕಾರಿ ಅಧಿಕಾರಿಯ ಬಿದ್ದು ಮದ್ಯ ಮಾರಾಟ ತಡೆಯಬೇಕೆಂದು ಅಂಗಲಾಚಿರುವ ವಿಡಿಯೋ ವೈರಲ್ ಆಗಿದೆ. ಅಲ್ಲದೇ ಮಹಿಳೆಯೊಬ್ಬರು ಪ್ರಜ್ಞೆತಪ್ಪಿ ಬಿದ್ದಿರುವುದರಿಂದ ಹೋರಾಟ ತೀವ್ರ ಸ್ವರೂಪಡೆದುಕೊಂಡಿತ್ತು ಎಂದು ತಿಳಿದುಬಂದಿದೆ.

ಸದ್ಯ ಅಬಕಾರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸ್ ಠಾಣೆಗೆ ಪ್ರತಿ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News