×
Ad

ಕಲಬುರಗಿಯಲ್ಲಿ ಶೇ.33 ಮತದಾರರಿಗೆ ಗಣತಿ ನಮೂನೆ ವಿತರಣೆ

ಮೂರು ದಿನಗಳಲ್ಲಿ 7.87 ಲಕ್ಷಕ್ಕೂ ಹೆಚ್ಚು ಮತದಾರರಿಗೆ ತಲುಪಿದ ಎಸ್‌ಐಆರ್ ಅಭಿಯಾನ

Update: 2026-07-02 21:56 IST

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಜಿಲ್ಲೆಯಾದ್ಯಂತ ಭರದಿಂದ ಸಾಗುತ್ತಿದ್ದು, ಕಳೆದ ಮೂರು ದಿನಗಳಲ್ಲಿ ಒಟ್ಟು 7,87,920 (ಶೇ.33.22) ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ.

ಜೂನ್ 16, 2026ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 23,71,542 ಮತದಾರರಿದ್ದು, ಜುಲೈ 2ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ-ಮನೆಗೆ ತೆರಳಿ ಶೇ.33.22ರಷ್ಟು ಮತದಾರರಿಗೆ ಗಣತಿ ನಮೂನೆ ವಿತರಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈವರೆಗೆ 8,318 (ಶೇ.0.35) ಮತದಾರರು ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಬಿಎಲ್‌ಒಗಳು ಸಂಗ್ರಹಿಸಿ ಮೊಬೈಲ್ ತಂತ್ರಾಂಶದ ಮೂಲಕ ಡಿಜಿಟಲೀಕರಣಗೊಳಿಸಿದ್ದಾರೆ. ಅಲ್ಲದೆ 1,152 (ಶೇ.0.05) ಮತದಾರರು ಸ್ವಯಂಪ್ರೇರಿತವಾಗಿ ಆನ್‌ಲೈನ್ ಮೂಲಕ ಗಣತಿ ನಮೂನೆ ಸಲ್ಲಿಸಿದ್ದಾರೆ.

ಮನೆ-ಮನೆಗೆ ಭೇಟಿ ವೇಳೆ 11 ಮತದಾರರು ಸ್ಥಳಾಂತರಗೊಂಡಿರುವುದು ಹಾಗೂ 60 ಮತದಾರರು ನಿಧನ ಹೊಂದಿರುವುದು ವರದಿಯಾಗಿದೆ ಎಂದು ತಿಳಿಸಿದರು.

ಜುಲೈ 29ರವರೆಗೆ ಬಿಎಲ್‌ಒಗಳು ಮನೆ-ಮನೆಗೆ ತೆರಳಿ ಮತದಾರರಿಗೆ ಗಣತಿ ನಮೂನೆ ವಿತರಿಸಿ, ಭರ್ತಿ ಮಾಡಿದ ಅರ್ಜಿಗಳನ್ನು ಪಡೆದು ಡಿಜಿಟಲೀಕರಣಗೊಳಿಸಲಿದ್ದಾರೆ. ಆದ್ದರಿಂದ ಎಲ್ಲ ಅರ್ಹ ಮತದಾರರು ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಹಕರಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಇಕ್ರಮ್ ಶರೀಫ್ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News