×
Ad

ಕೇಂದ್ರ ಸರಕಾರದ ಬಜೆಟ್ ನಿರಾಶಾದಾಯಕ : ಸಚಿವ ಪ್ರಿಯಾಂಕ್ ಖರ್ಗೆ

Update: 2025-02-01 18:47 IST

ಪ್ರಿಯಾಂಕ್ ಖರ್ಗೆ

ಕಲಬುರಗಿ: ಕೇಂದ್ರ ಸರಕಾರದ ಇಂತಹ ಹತ್ತು ಬಜೆಟ್ ನೋಡಿದ್ದೇವೆ. ಎಲ್ಲ ಬಜೆಟ್ನಲ್ಲಿಯೂ ಘೋಷಣೆಗಳು ಮಾತ್ರವೇ ಇರುತ್ತವೆಯೇ ಹೊರತು, ಅದರಲ್ಲಿ ಜನರಿಗೆ ಗಣನೀಯವಾಗಿ ಅನುಕೂಲ ಆಗುವುದಿಲ್ಲ. ಕಾರ್ಮಿಕರು, ಮಹಿಳೆಯರು, ಯುವಕರಿಗೆ, ಆದಾಯ ತೆರಿಗೆ ಪಾವತಿದಾರರು, ಎಸ್ಎಂಇ, ಎಂಎಸ್ಎಂಇ, ನವೋದ್ಯಮಿಗಳಿಗೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ಅವರು, ಆದಾಯ ತೆರಿಗೆ ಸ್ಲ್ಯಾಬ್ ಬಗ್ಗೆ ಮಾತನಾಡುತ್ತಿದ್ದಾರೆ. ಈ ಹಿಂದೆ ಜಿಎಸ್ಟಿ ಬಗ್ಗೆ, ಆದಾಯ ತೆರಿಗೆ ಬಗ್ಗೆಯೂ ಹೀಗೆ ಮಾತನಾಡಿದ್ದರು. ಈವರೆಗೂ ಅವರು ಟ್ಯಾಕ್ಸೇಷನ್ ಪದ್ಧತಿಯನ್ನು ಸರಿಯಾಗಿ ಅಳವಡಿಸಿಕೊಂಡಿಲ್ಲ ಎಂದಿದ್ದಾರೆ.

ಕೇಂದ್ರದ ಯಾವ ಯೋಜನೆ ಸಂಪೂರ್ಣವಾಗಿ ಯಶಸ್ವಿಯಾಗಿದೆ? ಸ್ಟಾರ್ಟ್ಅಪ್ ಇಂಡಿಯಾ ಯೋಜನೆಯಲ್ಲಿ 9 ವರ್ಷದ ಹಿಂದೆ 20 ಸಾವಿರ ಕೋಟಿ ರೂ. ಘೋಷಣೆ ಮಾಡಿ ಈವರೆಗೂ ಕೊಟ್ಟಿದ್ದು 454 ಕೋಟಿ ರೂ. ಅಷ್ಟೆ. ಅವರು ಅಲಂಕಾರಿಕ ಪದಗಳನ್ನು ಬಳಸಿ ಘೋಷಣೆಗಳನ್ನು ಮಾಡುವುದರಲ್ಲಿ ಮುಂದಿದ್ದಾರೆ. ಆದರೆ ಬೇರು ಮಟ್ಟದಲ್ಲಿ ಅನುಷ್ಠಾನ ಶೂನ್ಯವಾಗಿದೆ ಎಂದರು.

ಅವರ ಬಳಿ ದುಡ್ಡಿಲ್ಲ. ಕರ್ನಾಟಕದಲ್ಲಿ ಜಲಜೀವನ್ ಮಿಷನ್ನಲ್ಲಿ 3,500 ರೂ. ಕೋಟಿ ಕೊಡಬೇಕು. ಆದರೆ ನೀಡಿರುವುದು 500 ಕೋಟಿ ರೂ. ಮಾತ್ರ. ನಾವು ಕೇಳಿದಾಗ, ನಮ್ಮ ಬಳಿ ದುಡ್ಡಿಲ್ಲ ಎನ್ನುತ್ತಾರೆ. ಕೆಲಸ ನಿಲ್ಲಬಾರದು ಎಂಬ ಕಾರಣಕ್ಕಾಗಿ ಕೇಂದ್ರ ಸರಕಾರದ ಜವಾಬ್ದಾರಿಯನ್ನು ರಾಜ್ಯ ಸರಕಾರವೇ ನಿಭಾಯಿಸುತ್ತಿದೆ. ಉಳಿದ 3,000 ಕೋಟಿ ರೂ. ಮೊತ್ತವನ್ನು ನಾವೇ ಬಿಡುಗಡೆ ಮಾಡಿದ್ದೇವೆ. ಕೇಂದ್ರ ಸರಕಾರದ ಬಜೆಟ್ ದೊಡ್ಡ ದೊಡ್ಡ ಘೋಷಣೆಗಳಿಗೆ ಸೀಮಿತವಾಗಿದೆ. ಆದರೆ ಅವುಗಳ ಪರಿಪೂರ್ಣ ಅನುಷ್ಠಾನ ಎಂದಿಗೂ ನಡೆದಿಲ್ಲ ಎಂದು ಹೇಳಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News