×
Ad

Chincholi | ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

Update: 2026-02-12 18:45 IST

ಚಿಂಚೋಳಿ : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಗುರುವಾರ ಚಿಂಚೋಳಿ ತಾಲೂಕು ಕೇಂದ್ರದಲ್ಲಿ ಸಿಪಿಐ(ಎಂ) ಮತ್ತು ಕೆಪಿಆರ್ ಎಸ್ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಂಗನವಾಡಿ ನೌಕರರನ್ನು ಶಾಶ್ವತ ಸರ್ಕಾರಿ ನೌಕರರೆಂದು ಪರಿಗಣಿಸದೆ ಅಲ್ಪ ಗೌರವಧನದಲ್ಲಿ ದುಡಿಸಿಕೊಳ್ಳುತ್ತಿರುವುದು ತೀವ್ರ ಅನ್ಯಾಯಕಾರ ಎಂದು ಪಕ್ಷದ ಮುಖಂಡರು ಆರೋಪಿಸಿದರು.

ಪ್ರಸ್ತುತ ಸಿಗುತ್ತಿರುವ ಕಡಿಮೆ ಗೌರವಧನದಿಂದ ಕುಟುಂಬ ನಿರ್ವಹಣೆ ಅಸಾಧ್ಯವಾಗಿದ್ದು, ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ನಡೆಸುವುದು ಕಷ್ಟಕರವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಜಾಫರ್ ಖಾನ್ ಮಿರಿಯಾಣ, ಭೀಮಶೇಟ್ಟಿ ಯಂಪಳ್ಳಿ, ಸಿದ್ದಲಿಂಗಯ್ಯ ಸ್ವಾಮಿ, ಪ್ರಭು ಪ್ಯಾರಸಬಾದಿ ಮತ್ತು ಅಂಗನವಾಡಿ ನೌಕರರು, ಕಾರ್ಮಿಕ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News