ಚಿಂಚೋಳಿ : ಭಕ್ತ ಕನಕದಾಸರು ಭಕ್ತಿ, ತ್ಯಾಗ ಮತ್ತು ಸಮಾನತೆಯ ಪ್ರತೀಕವಾಗಿದ್ದರು. ಕುಟುಂಬ ಹಾಗೂ ಅಧಿಕಾರವನ್ನು ತ್ಯಜಿಸಿ ಭಕ್ತಿಯ ಮಾರ್ಗದಲ್ಲಿ ಸಾಗಿದ ಅವರು, ತಮ್ಮ ಕೀರ್ತನೆಗಳ ಮೂಲಕ ಸಮಾಜ ಸುಧಾರಣೆ ಮತ್ತು ಧಾರ್ಮಿಕ ಸಮನ್ವಯತೆಗೆ ಒತ್ತು ನೀಡಿದ್ದರು ಎಂದು ತಹಸೀಲ್ದಾರ್ ಶಿವಾನಂದ ಮೇತ್ರೆ ಹೇಳಿದರು.

ಪಟ್ಟಣದ ಚಂದಾಪುರದ ಪ್ರಜಾಸೌಧ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕನಕದಾಸರು ಜಾತಿಭೇದ ಹಾಗೂ ಅಸಮಾನತೆಗಳ ವಿರುದ್ಧ ತಮ್ಮ ಸಾಹಿತ್ಯದ ಮೂಲಕ ಧ್ವನಿ ಎತ್ತಿದ್ದರು. ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಸಂದೇಶ ಸಾರಿದ ಅವರು, ಭಕ್ತಿಯ ಮಾರ್ಗದ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿದಿದ್ದರು. ಅವರ ತತ್ವ ಮತ್ತು ಆದರ್ಶಗಳು ಇಂದಿನ ಸಮಾಜಕ್ಕೂ ದಾರಿದೀಪವಾಗಿವೆ. ಯುವಜನರು ಕನಕದಾಸರ ಸಾಹಿತ್ಯವನ್ನು ಅಧ್ಯಯನ ಮಾಡಿ, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ನಿವೃತ್ತ ಪ್ರಾಧ್ಯಾಪಕ ನಾರಾಯಣ ರೋಲೆಕರ ಉಪನ್ಯಾಸ ನೀಡಿದರು. ಪುರಸಭೆ ಅಧಿಕಾರಿ ವಿಜಯ ಮಹಾಂತೇಶ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಶೋಕ ಹುವಿನಬಾವಿ ಕಾರ್ಯಕ್ರಮ ನಿರೂಪಿಸಿದರು. ಮಲ್ಲಿಕಾರ್ಜುನ ಪಾಲಾಮೂರ್ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ