×
Ad

ಚಿಂಚೋಳಿ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Update: 2025-05-14 20:07 IST

ಕಲಬುರಗಿ : ಹಿರಿಯ ಮುಖಂಡ ಅಶೋಕ ಮೊಗದಂಪೂರ ಜನ್ಮ ದಿನದ ಪ್ರಯುಕ್ತ ಚಿಂಚೋಳಿ ತಾಲ್ಲೂಕಿನ ಕುಂಚಾವರಂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ ರಕ್ತದಾನ ಶಿಬಿರದಲ್ಲಿ 50ಕ್ಕೂ ಹೆಚ್ಚು ದಾನಿಗಳು ರಕ್ತದಾನ ಮಾಡಿದರು.

ತಾಲೂಕು ಅರೋಗ್ಯ ಅಧಿಕಾರಿ ಡಾ.ಗಫಾರ್ ಅವರು ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ದೇಶದಲ್ಲಿ ಪ್ರತಿವರ್ಷ 41 ದಶಲಕ್ಷ ಯುನಿಟ್ ರಕ್ತದ ಕೊರತೆ ಎದುರಾಗುತ್ತಿದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು, ಅಪಘಾತದ ಗಾಯಾಳುಗಳು ಮೃತಪಡುತ್ತಿದ್ದಾರೆ. ಅಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದ್ದು, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕುಂಚಾವರಂ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ಅಧಿಕಾರಿ ಡಾ.ಬಾಲಾಜಿ ಪಾಟೀಲ್, ಬಿಜೆಪಿ ಮುಖಂಡ ಅಶೋಕ ಮೋಗದಂಪೂರ, ಕುಂಚಾವರಂ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಿ.ಗೋಪಾಲ, ಅಧ್ಯಕ್ಷೆ ಸುಜಾತಾ ರಮೇಶ, ರಿಯಾಝ್‌, ಅಂತಪ್ಪ, ಗೋವರ್ಧನ್, ನವೀನ್, ಖದೀರ್, ಸಂಗಮೇಶ, ಅಶೋಕ, ಮಹೇಶ, ಪಂಡರಿ ಬ್ಯಾಗರಿ ಅವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News