ಚಿತ್ತಾಪುರ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರ ಪರವಾಗಿ ಬಿಜೆಪಿ ಮುಖಂಡರು ತಾಲೂಕಿನ ದಿಗ್ಗಾಂವ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಆರ್. ರುದ್ರಯ್ಯ, ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ, ಯುವ ಮೋರ್ಚಾ ಅಧ್ಯಕ್ಷ ಸಂಗಮೇಶ್ ಪಾಟೀಲ, ಪ್ರಹ್ಲಾದ್ ಮಠಮಾರಿ ಸೇರಿದಂತೆ ಶಾಲೆಯ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor