Chitapur | ಬಡ ಹೆಣ್ಣು ಮಕ್ಕಳಿಗೆ ಸೀರೆ ವಿತರಿಸಿ ಪ್ರಿಯಾಂಕ್ ಖರ್ಗೆ ಜನ್ಮದಿನ ಆಚರಣೆ
ಚಿತ್ತಾಪುರ : ಪಟ್ಟಣದ ರಾಷ್ಟ್ರಕೂಟರ ಕುಲದೇವತೆ ಎಂದೇ ಪ್ರಸಿದ್ಧಿ ಪಡೆದಿರುವ ನಾಗಾವಿ ಯಲ್ಲಮ್ಮ ದೇವಸ್ಥಾನದ ಸನ್ನಿಧಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ 48ನೇ ಜನ್ಮದಿನವನ್ನು ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪುರಸಭೆಯ ಮಾಜಿ ಸದಸ್ಯ ಜಗದೀಶ ಚವ್ಹಾಣ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲು ನಾಗಾವಿ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಆಯುಷ್ಯ, ಆರೋಗ್ಯ ಹಾಗೂ ರಾಜಕೀಯ ಜೀವನದಲ್ಲಿ ಮತ್ತಷ್ಟು ಉನ್ನತ ಸಾಧನೆಗಳು ಲಭಿಸಲಿ ಎಂದು ಪ್ರಾರ್ಥಿಸಲಾಯಿತು.
ನಂತರ ಬಡ ಹೆಣ್ಣು ಮಕ್ಕಳಿಗೆ ಉಚಿತವಾಗಿ ಸೀರೆಗಳನ್ನು ವಿತರಿಸುವ ಮೂಲಕ ಜನ್ಮದಿನವನ್ನು ಸಮಾಜಮುಖಿ ಕಾರ್ಯದೊಂದಿಗೆ ಆಚರಿಸಲಾಯಿತು. ಬಳಿಕ ಕೇಕ್ ಕತ್ತರಿಸಿ, ಪರಸ್ಪರ ಸಿಹಿ ತಿನ್ನಿಸುವ ಮೂಲಕ ಮುಖಂಡರು ಹಾಗೂ ಅಭಿಮಾನಿಗಳು ಸಂಭ್ರಮ ಹಂಚಿಕೊಂಡರು.
ಹುಟ್ಟುಹಬ್ಬದ ಆಚರಣೆಯನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ, ಬಡ ಮಹಿಳೆಯರಿಗೆ ನೆರವಾಗುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದ್ದು ಕಾರ್ಯಕ್ರಮದ ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಭೀಮಸಿಂಗ್ ಚವ್ಹಾಣ, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ ಚವ್ಹಾಣ, ಮನೋಹರ ಚವ್ಹಾಣ, ಅನಿಲ್ ರಾಠೋಡ್, ದೇವಿದಾಸ್, ಶಂಕರ್ ಚವ್ಹಾಣ, ಸುಭಾಷ್ ಜಾಧವ್, ಗೋಪಿ ರಾಠೋಡ್, ವಿಜಯಕುಮಾರ್ ಚವ್ಹಾಣ, ಮಹಾದೇವ ರಾಠೋಡ್, ರವಿ ಜಾಧವ್, ಸೋಮುಸಿಂಗ್ ಚವ್ಹಾಣ, ಸಚಿನ್ ಚವ್ಹಾಣ, ಅನಿಲ್ ಚವ್ಹಾಣ, ಗೋಪಿ ಚವ್ಹಾಣ, ಅಜಯ್ ಚವ್ಹಾಣ, ಭದ್ರು ರಾಠೋಡ್ ಸೇರಿದಂತೆ ಬಂಜಾರ ಸಮಾಜದ ಹಲವು ಮುಖಂಡರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.