Chitapur | ಪ್ರಿಯಾಂಕ್ ಖರ್ಗೆ ಜನ್ಮದಿನ: ಬಾಣಂತಿಯರು, ಸಾರ್ವಜನಿಕರಿಗೆ ಹಣ್ಣು ವಿತರಣೆ
ಚಿತ್ತಾಪುರ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಯುವ ಕಾಂಗ್ರೆಸ್ ವತಿಯಿಂದ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ 48ನೇ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿದ್ದ ಬಾಣಂತಿಯರು ಹಾಗೂ ಸಾರ್ವಜನಿಕರಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಸಚಿವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಜನ್ಮದಿನದ ಅಂಗವಾಗಿ ಸೇವಾ ಕಾರ್ಯಕ್ಕೆ ಆದ್ಯತೆ ನೀಡಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಬಾಣಂತಿಯರು ಮತ್ತು ಸಾರ್ವಜನಿಕರಿಗೆ ಹಣ್ಣು ವಿತರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಕ್ತಾರ್ ಪಟೇಲ್, ಯುವ ಕಾಂಗ್ರೆಸ್ ಅಧ್ಯಕ್ಷ ದೇವು ಯಾಬಾಳ, ಮಲ್ಲಿಕಾರ್ಜುನ ಬಮ್ಮನಳ್ಳಿ, ದೇವಿಂದ್ರ ಅಣಕಲ್, ವೆಂಕಟೇಶ ಕುಲಕರ್ಣಿ, ಮಲ್ಲಿಕಾರ್ಜುನ ಕಾಳಗಿ, ಶೀಲಾ ಕಾಶಿ, ಚಂದ್ರಶೇಖರ ಕಾಶಿ, ರಾಮಲಿಂಗ ಬಾನಾರ್, ನಾಗರೆಡ್ಡಿ ಗೋಪಸೇನ್, ಶಿವಕಾಂತ ಬೆಣ್ಣೂರಕರ್, ಮಲ್ಲಿಕಾರ್ಜುನ ಮುಡಬೂಳಕರ್, ಭೀಮು ಹೊತಿನಮಡಿ, ಸಾಬಣ್ಣ ಡಿಗ್ಗಿ, ವಿನ್ನುಕುಮಾರ್ ಜೆ.ಡಿ., ರವಿ ಸಾಗರ್, ಬಾಗು ಮೊಗಲಾ, ಗಂಗಾಧರ್ ಡಿಗ್ಗಿ, ರವೀಂದ್ರರೆಡ್ಡಿ ಭಂಕಲಗಾ, ಭೀಮು ದೊರೆ ದೊಗ್ಗಾಂವ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.