ಸಾಂದರ್ಭಿಕ ಚಿತ್ರ

ಚಿತ್ತಾಪುರ: ತಾಲೂಕಿನ ಕರದಾಳ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಅಣಿಕೇರ ಜಯರಾಮ್ ತಾಂಡಾದ ನಿವಾಸಿ ದೇವಿಬಾಯಿ ಲಾಲು (52) ವಿಷಪೂರಿತ ಹಾವು ಕಡಿತದಿಂದ ಮೃತಪಟ್ಟ ಘಟನೆ ನಡೆದಿದೆ.

ದೇವಿಬಾಯಿ ಅವರು ತಮ್ಮ ಪತಿಯೊಂದಿಗೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷಕಾರಿ ಹಾವು ಕಚ್ಚಿದೆ ಎಂದು ತಿಳಿದುಬಂದಿದೆ. ತಕ್ಷಣ ಅವರನ್ನು ಚಿತ್ತಾಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಮುಹಮ್ಮದ್‌ ಇರ್ಫಾನ್ ತಿಳಿಸಿದ್ದಾರೆ.

ಮೃತರು ನಾಲ್ವರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಳಿದ್ದಾರೆ.

ಈ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor