×
Ad

ಚಿತ್ತಾಪುರ | ಶಾಲೆಯಲ್ಲಿ ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Update: 2024-07-01 19:23 IST

ಚಿತ್ತಾಪುರ: ತಾಲೂಕಿನ ಕನಗನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿರುವ ಮಕ್ಕಳನ್ನು ಕೊಲ್ಲೂರಿನ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಅಸ್ವಸ್ಥಗೊಂಡ ಕೆಲವು ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ವಾಡಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ಮಧ್ಯಾಹ್ನ ಊಟದ ಬಳಿಕ ಮಕ್ಕಳಲ್ಲಿ ವಾಂತಿ ಮತ್ತು ತಲೆ ಸುತ್ತುವಿಕೆ ಕಂಡುಬಂದಿದೆ ಎನ್ನಲಾಗಿದ್ದು, ಶಾಲಾ ಆಡಳಿತದ ವಿರುದ್ಧ ಪೊಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News