ಚಿತ್ತಾಪುರ | ಸಂಚರಿಸುತ್ತಿದ್ದ ಬಸ್‌ನ ಸ್ಟೇರಿಂಗ್ ಲಾಕ್‌ನಿಂದ ಅಪಘಾತ : ಮಹಿಳೆಗೆ ಗಾಯ
Update: 2026-01-30 21:40 IST
ಚಿತ್ತಾಪುರ : ಪಟ್ಟಣದ ಹೊರವಲಯದ ಕಲಬುರಗಿ–ಚಿತ್ತಾಪುರ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್‌ನ ಸ್ಟೇರಿಂಗ್ ಲಾಕ್ ಆಗಿದ್ದರಿಂದ ಬಸ್ ಚಾಲಕ ತಕ್ಷಣವೇ ರಸ್ತೆ ಪಕ್ಕಕ್ಕೆ ಬಸ್ ನಿಲ್ಲಿಸಿದ ಪರಿಣಾಮ, ಬಸ್ಸಿನಲ್ಲಿದ್ದ ಮಹಿಳೆಯೊಬ್ಬರಿಗೆ ಗಾಯಗಳಾಗಿರುವ ಘಟನೆ ಶುಕ್ರವಾರ ಸಂಭವಿಸಿದೆ.
ಕಲಬುರಗಿಯಿಂದ ಚಿತ್ತಾಪುರಕ್ಕೆ ತೆರಳುತ್ತಿದ್ದ ಬಸ್‌ಗೆ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಅವಘಡದ ವೇಳೆ ಒರ್ವ ಮಹಿಳೆಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆ ಪಿಎಸ್'ಐ ಮಂಜುನಾಥ ರೆಡ್ಡಿ ಸೇರಿದಂತೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.