×
Ad

ಚಿತ್ತಾಪುರ | ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Update: 2025-05-20 17:40 IST

ಕಲಬುರಗಿ: ಚಿತ್ತಾಪೂರ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ ನಂತರದ (ಪಿ.ಯು.ಸಿ. ಮತ್ತು ಪಿ.ಯು.ಸಿ. ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳು) ವಿದ್ಯಾರ್ಥಿ ನಿಲಯಗಲ್ಲಿ 2025-26 ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಿತ್ತಾಪುರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಚಿತ್ತಾಪೂರ ತಾಲೂಕಿನ ಎಲ್ಲಾ ವಿವಿಧ ಕಾಲೇಜುಗಳಲ್ಲಿ ಪಿ.ಯು.ಸಿ. ಮತ್ತು ಪಿ.ಯು. ಸಮಾನಾಂತರ ಕೋರ್ಸಿನ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು www.bcwd.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2025ರ ಜೂನ್ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು. ನಂತರ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಅಪ್ಲಿಕೇಶನ್ ಪ್ರಿಂಟ ತೆಗೆದು ವಸತಿ ನಿಲಯದ ಮೇಲ್ವಿಚಾರಕರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಇ-ಮೇಲ್ ಮುಖಾಂತರ, ಸಹಾಯವಾಣಿ ಸಂಖ್ಯೆ: 8050770005 ಅಥವಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು/ನಿಲಯ ಮೇಲ್ವಿಚಾರಕರು ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News