ಚಿತ್ತಾಪುರ | ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
Update: 2025-11-13 12:23 IST
ಸಾಂದರ್ಭಿಕ ಚಿತ್ರ | PC : PTI
ಕಲಬುರಗಿ: ಚಿತ್ತಾಪುರ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹಯಾಗಿರುವುದು ವರದಿಯಾಗಿದೆ.
ಮೃತ ವ್ಯಕ್ತಿಗೆ 35-40 ಅಂದಾಜು ವಯಸ್ಸಾಗಿದ್ದು, ಗುರುತು ಪತ್ತೆಯಾಗಿಲ್ಲ. ಗುರುತು ಪತ್ತೆ ಕುರಿತು ಮೃತದೇಹವನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಿತ್ತಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.