×
Ad

ಚಿತ್ತಾಪುರ: ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

Update: 2025-06-02 14:12 IST

ಕಲಬುರಗಿ: ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಲಾಡ್ಲಾಪುರ ಬೈ ಪಾಸ್ ರಾಷ್ಟ್ರೀಯ ಹೆದ್ದಾರಿ 150ರ ಪಕ್ಕದ ತಗ್ಗಿನಲ್ಲಿ ಅಂದಾಜು 40 ವರ್ಷ ವಯಸ್ಸಿನ ಮಹಿಳೆಯ ಶವ ಸಿಕ್ಕಿದೆ. ಮಹಿಳೆಯನ್ನು ಅತ್ಯಾಚಾರ ಮಾಡಿ ನಂತರ ಪೆಟ್ರೋಲ್ ಸುರಿದು ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಡಿವೈಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ, ಪಿಎಸ್‌ಐ ತಿರುಮಲೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News