×
Ad

Chittapura| ಕಲ್ಲಿನಿಂದ ಜಜ್ಜಿ ಯುವಕನ ಹತ್ಯೆ

Update: 2026-05-14 11:26 IST

ಕಲಬುರಗಿ: ಯುವಕನೊಬ್ಬನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಚಿತ್ತಾಪುರ ತಾಲೂಕಿನ ಅಲ್ಲೂರ್ (ಬಿ) ಗ್ರಾಮದಲ್ಲಿ ನಡೆದಿದೆ.

ಸಿದ್ದಪ್ಪ ಮಲ್ಲಪ್ಪ ಹುಳಗೊಳರ್ (25) ಕೊಲೆಯಾದ ಯುವಕ.

ಮಂಗಳವಾರ ರಾತ್ರಿ ಗ್ರಾಮದ ಕೆರೆಯ ಬಳಿ ಸಿದ್ದಪ್ಪರ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಹಳೇ ದ್ವೇಷದಿಂದ ಈ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನಾ ಸ್ಥಳಕ್ಕೆ ಎಸ್ಪಿ ಅಡ್ಡೂರು ಶ್ರೀನಿವಾಸಲು, ಡಿವೈಎಸ್ಪಿ ಶಂಕರಗೌಡ ಪಾಟೀಲ್, ಪಿಎಸ್ಸೈ ಮಂಜುನಾಥ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News