×
Ad

Chittapura | ಮೊರಾರ್ಜಿ ದೇಸಾಯಿ ವಸತಿ ನಿಲಯದ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ: ಜಿಲ್ಲಾಧಿಕಾರಿಯಿಂದ ವಿದ್ಯಾರ್ಥಿಗಳ ಆರೋಗ್ಯ ವಿಚಾರಣೆ

Update: 2026-07-10 11:03 IST

ಕಲಬುರಗಿ: ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ನಿಲಯದ ವಿದ್ಯಾರ್ಥಿಗಳು ಆಹಾರ ಸೇವಿಸಿ ಅಸ್ವಸ್ಥಗೊಂಡ ಪ್ರಕರಣದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ಗುರುವಾರ ರಾತ್ರಿ ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.

ಆಸ್ಪತ್ರೆಯ ವಾರ್ಡ್ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿಯ ಕುರಿತು ವೈದ್ಯರಿಂದ ಮಾಹಿತಿ ಪಡೆದು, ಎಲ್ಲ ವಿದ್ಯಾರ್ಥಿಗಳಿಗೆ ಅಗತ್ಯ ಚಿಕಿತ್ಸೆ ಹಾಗೂ ಔಷಧೋಪಚಾರವನ್ನು ಯಾವುದೇ ಕೊರತೆಯಾಗದಂತೆ ಸಮರ್ಪಕವಾಗಿ ಒದಗಿಸುವಂತೆ ಸೂಚಿಸಿದರು.

ಅಲ್ಲದೆ, ವಿದ್ಯಾರ್ಥಿಗಳ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಿ, ವೈದ್ಯಕೀಯ ಸೇವೆಯಲ್ಲಿ ಯಾವುದೇ ನಿರ್ಲಕ್ಷ್ಯವಾಗದಂತೆ ಎಚ್ಚರಿಕೆ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಜಿಲ್ಲಾ ಅಧಿಕಾರಿ ಶರಣಬಸಪ್ಪ ಕ್ಯಾತನಾಳ ಸೇರಿದಂತೆ ಜಿಮ್ಸ್ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ, ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News