×
Ad

ಕಲಬುರಗಿಯ ಖ್ವಾಜಾ ಬಂದೇ ನವಾಝ್‌ ದರ್ಗಾ, ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ

Update: 2026-07-07 17:11 IST

ಕಲಬುರಗಿ :  ಸೂಫಿ ಸಂತ ಖ್ವಾಜಾ ಬಂದೇ ನವಾಝ್‌ ದರ್ಗಾ ಹಾಗೂ ಮಹಾದಾಸೋಹಿ ಶರಣಬಸವೇಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿದರು.

ಈ ವೇಳೆ ದರ್ಗಾ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯವರು ಮುಖ್ಯಮಂತ್ರಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಿದರು.

ಮುಖ್ಯಮಂತ್ರಿಗಳೊಂದಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಗೃಹ ಸಚಿವ ಹಾಗೂ ಕಲಬುರಗಿ-ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವರಾದ ಶರಣಪ್ರಕಾಶ್ ಪಾಟೀಲ್, ಯು.ಟಿ.ಖಾದರ್ ಹಾಗೂ ರಹೀಂ ಖಾನ್ ಉಪಸ್ಥಿತರಿದ್ದರು. ಗಣ್ಯರು ವಿಶೇಷ ಪೂಜೆ ಹಾಗೂ ಪ್ರಾರ್ಥನೆಯಲ್ಲಿ ಭಾಗವಹಿಸಿ ರಾಜ್ಯದ ಸುಭಿಕ್ಷತೆ, ಶಾಂತಿ ಮತ್ತು ಜನರ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು.

ದರ್ಗಾದ ಸಜ್ಜಾದಾ ನಶೀನ್ ಹಾಗೂ ಶರಣಬಸವೇಶ್ವರ ದೇವಸ್ಥಾನದ ಪೀಠಾಧಿಪತಿಗಳು ಮತ್ತು ಆಡಳಿತ ಮಂಡಳಿಯ ಪ್ರಮುಖರು, ಮುಖ್ಯಮಂತ್ರಿಗಳು ಸೇರಿದಂತೆ ಸಚಿವರನ್ನು ಗೌರವಿಸಿದರು.

ಈ ವೇಳೆ ಶಾಸಕ ಅಲ್ಲಮಪ್ರಭು ಪಾಟೀಲ್, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಡಾ.ಸೈಯದ್ ಮುಹಮ್ಮದ್ ಅಲಿ ಅಲ್ ಹುಸೈನಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ (ಕುಡಾ) ಅಧ್ಯಕ್ಷ ಮಜರ್ ಆಲಮ್ ಖಾನ್, ಜಿಎಸ್‌ಕಾಂ ಅಧ್ಯಕ್ಷ ಪ್ರವೀಣ ಪಾಟೀಲ್, ಅರುಣ್ ಕುಮಾರ್ ಪಾಟೀಲ್, ಸೈಯದ್ ಮುಸ್ತಫಾ ಅಲ್ ಹುಸೈನಿ, ಯದ್ದುಲ್ಲಾ ಹುಸೈನಿ ನಿಜಾಮ್ ಬಾಬಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

 

 

 

 

 

 

 

 

 

 

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News