ಡಾ.ಶರಣಬಸವಪ್ಪ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
ಸಿದ್ದರಾಮಯ್ಯ
ಬೆಂಗಳೂರು : ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ಡಾ.ಶರಣಬಸಪ್ಪ ಅಪ್ಪಾ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯವರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಶರಣರ ನಾಡು ಕಲಬುರಗಿಯ ಮಹಾದಾಸೋಹಿ, ಶರಣ ಬಸವೇಶ್ವರ ಮಹಾಸಂಸ್ಥಾನದ ಮಠಾಧೀಶರಾದ ಡಾ.ಶರಣಬಸಪ್ಪ ಅಪ್ಪನವರು ಲಿಂಗೈಕ್ಯರಾದ ಸುದ್ದಿ ನೋವುಂಟು ಮಾಡಿದೆ ಎಂದು ತಿಳಿಸಿದ್ದಾರೆ.
ಬಸವಾದಿ ಶರಣರು ತೋರಿದ ಕಾಯಕ ಮತ್ತು ದಾಸೋಹದ ಹಾದಿಯಲ್ಲಿ ನಡೆಯುತ್ತಾ, ಸಮಾಜದ ಏಳಿಗೆಗಾಗಿ ಸದಾ ತುಡಿಯುತ್ತಿದ್ದ ನಿಜ ಬಸವಾನುಯಾಯಿ ಶರಣಬಸಪ್ಪ ಅಪ್ಪನವರ ಅಗಲಿಕೆಯಿಂದ ನಾಡು ಬಡವಾಗಿದೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ, ಗುರುಗಳ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಭಕ್ತವೃಂದಕ್ಕೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.
ಶರಣರ ನಾಡು ಕಲಬುರಗಿಯ ಮಹಾದಾಸೋಹಿ, ಶರಣ ಬಸವೇಶ್ವರ ಮಹಾಸಂಸ್ಥಾನದ ಮಠಾಧೀಶರಾದ ಡಾ. ಶರಣಬಸಪ್ಪ ಅಪ್ಪನವರು ಲಿಂಗೈಕ್ಯರಾದ ಸುದ್ದಿ ನೋವುಂಟು ಮಾಡಿದೆ.ಬಸವಾದಿ ಶರಣರು ತೋರಿದ ಕಾಯಕ ಮತ್ತು ದಾಸೋಹದ ಹಾದಿಯಲ್ಲಿ ನಡೆಯುತ್ತಾ, ಸಮಾಜದ ಏಳಿಗೆಗಾಗಿ ಸದಾ ತುಡಿಯುತ್ತಿದ್ದ ನಿಜ ಬಸವಾನುಯಾಯಿ ಶರಣಬಸಪ್ಪ ಅಪ್ಪನವರ ಅಗಲಿಕೆಯಿಂದ ನಾಡು ಬಡವಾಗಿದೆ.ಅವರ… pic.twitter.com/MK8SPwYPhE
— Siddaramaiah (@siddaramaiah) August 14, 2025