×
Ad

ಸಿಎಂ ಅವರ ಐತಿಹಾಸಿಕ ನಿರ್ಧಾರದಿಂದ ದಲಿತ ಸಮುದಾಯಕ್ಕೆ ಒಳ ಮೀಸಲಾತಿ: ಶಾಸಕ ಅಲ್ಲಂಪ್ರಭು ಪಾಟೀಲ್‌

Update: 2025-08-20 23:40 IST

ಕಲಬುರಗಿ: ದಲಿತ ಸಮುದಾಯಕ್ಕೆ ಒಳ ಮೀಸಲಾತಿ ಘೋಷಿಸಿರುವ ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ನಿರ್ಧಾರ ಐತಿಹಾಸಿಕವಾಗಿದೆ. ಯಾರಿಗೂ ಅಸಮಾಧಾನವಾಗದಂತೆ ಎಲ್ಲರಿಗೂ ವೈಜ್ಞಾನಿಕವಾಗಿ ಸರಿಯಾಗಿ ಮೀಸಲಾತಿ ನಿಗದಿ ಮಾಡಿ ತೀರ್ಮಾನ ಕೈಗೊಂಡಿದ್ದಾರೆ ಎಂದು ಕಲಬುರಗಿ ದಕ್ಷಿಣ ಶಾಸಕ ಅಲ್ಲಂಪ್ರಭು ಪಾಟೀಲ್‌ ಅವರು ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಈ ಕುರಿತಂತೆ ಹೇಳಿಕೆ ನೀಡಿರುವ ಶಾಸಕರು, ಎಡಗೈ, ಬಲಗೈಗೆ ತಲಾ ಶೇ.6, ಇತರೆಗೆ ಶೇ.5ರಷ್ಟು ಮೀಸಲಾತಿ ನೀಡಬೇಕೆಂಬ ಸರ್ಕಾರದ ನಿರ್ಣಯ ಅತ್ಯುತ್ತಮವಾಗಿದೆ. ಎಲ್ಲಾ ಪರಿಶಿಷ್ಟ ಜಾತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸುವ ತೀರ್ಮಾನವಾಗಿದೆ ಎಂದಿದ್ದಾರೆ.

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ವಿಚಾರದಲ್ಲಿ ಎಲ್ಲರಿಗೂ ತೃಪ್ತಿಪಡುವ ತೀರ್ಮಾನ ಆಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬಹಳ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮೂರು ಒಪ್ಪಂದ ಮಾಡಿಕೊಳ್ಳಲಾಗಿದೆ, ಎಲ್ಲರಿಗೂ ತೃಪ್ತಿ ನೀಡುವ ಘೋಷಣೆ ಇದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News