ಬೆಂಗಳೂರಲ್ಲಿ ಯುಎಸ್ಎ ಕಾನ್ಸುಲೇಟ್ ಕಚೇರಿ ನಿರ್ಮಾಣ : ಸಚಿವ ಪ್ರಿಯಾಂಕ್ ಖರ್ಗೆ ಸಂತಸ
Update: 2024-12-20 16:40 IST
ಪ್ರಿಯಾಂಕ್ ಖರ್ಗೆ
ಕಲಬುರಗಿ: ಬೆಂಗಳೂರಿನಲ್ಲಿ ಅಮೇರಿಕಾ ಕಾನ್ಸುಲೇಟ್ ಕಚೇರಿ ಆರಂಭಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅವರು, ಇದೇ ಜನವರಿಯಲ್ಲಿ ಬೆಂಗಳೂರಿನಲ್ಲಿ ಅಮೇರಿಕಾ ಕಾನ್ಸುಲೇಟ್ ತನ್ನ ಕಚೇರಿಯನ್ನು ತೆರೆಯುತ್ತಿದೆ. ಇದು ಕರ್ನಾಟಕದ ಪ್ರಗತಿಗೆ ಬಹುದೊಡ್ಡ ಕೊಡುಗೆ ನೀಡಲಿದ್ದು, ರಾಜ್ಯದ ಆರ್ಥಿಕತೆಗೆ ಇನ್ನಷ್ಟು ಶಕ್ತಿ ತುಂಬಲಿದೆ. ಇದು ಭಾರತ ಮತ್ತು ಅಮೆರಿಕ ನಡುವಿನ ಸಂಬಂಧವನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಜೊತೆಗೆ ರಾಜತಾಂತ್ರಿಕ, ತಾಂತ್ರಿಕ ಮತ್ತು ಆರ್ಥಿಕ ಸಹಯೋಗವನ್ನು ಉತ್ತೇಜಿಸುತ್ತದೆ ಎಂದು ಸಚಿವರು ಹೇಳಿದ್ದಾರೆ.
ಮುಂದಿನ ತಿಂಗಳು ಬೆಂಗಳೂರಿನಲ್ಲಿ ಅಮೇರಿಕ ಕಾನ್ಸುಲೇಟ್ ಕಚೇರಿ ತೆರೆಯುವ ನಿರೀಕ್ಷೆಯಿದೆ ಎಂದು ಅಮೇರಿಕಾ ರಾಯಭಾರಿಗಳು ತಿಳಿಸಿದ್ದಾರೆ ಎಂದು ಪ್ರಿಯಾಂಕ್ ಪೋಸ್ಟ್ ಮಾಡಿದ್ದಾರೆ.