×
Ad

ಕಲಬುರಗಿ | ಎನ್. ರವಿಕುಮಾರ್, ಛಲವಾದಿ ನಾರಾಯಣ್ ಸ್ವಾಮಿ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸುವಂತೆ ದೀಪಕನಾಗ್ ಪುಣ್ಯಶೆಟ್ಟಿ ಆಗ್ರಹ

Update: 2025-05-30 20:41 IST

ಕಲಬುರಗಿ: ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ಜಿಪಂ ಮಾಜಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ ಆಗ್ರಹಿಸಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೋ ನನಗೆ ಗೊತ್ತಿಲ್ಲ. ನಿಮ್ಮ ಚಪ್ಪಾಳೆ ನೋಡಿದರೆ, ಜಿಲ್ಲಾಧಿಕಾರಿ ನಿಜಕ್ಕೂ ಪಾಕಿಸ್ತಾನದಿಂದ ಬಂದಿರುವಂತೆ ಕಾಣುತ್ತಿದೆ ಎಂದು ಹೇಳಿಕೆ ನೀಡಿರುವುದನ್ನು ಖಂಡಿಸುತ್ತೇನೆ ಎಂದು ದೀಪಕನಾಗ ಪುಣ್ಯಶೆಟ್ಟಿ ಹೇಳಿದರು. 

ಛಲವಾದಿ ನಾರಾಯಣ್ ಸ್ವಾಮಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ. ಐಎಎಸ್ ಅಧಿಕಾರಿಯನ್ನು ಪಾಕಿಸ್ತಾನದಿಂದ ಬಂದಿದ್ದಾರಾ? ಎಂದು ಕೇಳಿರುವ ರವಿಕುಮಾರ್ ಅವರನ್ನು ಅಮಾನತ್ತುಗೊಳಿಸಬೇಕು. ಇವರಿಬ್ಬರೂ ಸಮಾಜಕ್ಕೆ ತಪ್ಪು ಸಂದೇಶ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಇದಲ್ಲದೆ ಅಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಮುಂದಾಳತ್ವ ವಹಿಸಿದ ಸೋಫಿಯಾ ಖುರೇಷಿ ಅವರಿಗೆ ಬಿಜೆಪಿಗರು ಅವಮಾನ ಮಾಡಿದ್ದಾರೆ. ದೇಶಕ್ಕಾಗಿ ಪ್ರಾಣ ಕೊಡಲು ಸಿದ್ಧರಿರುವ ಸೈನಿಕರಿಗೆ ಅವಮಾನ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. 

ಈ ಸಂದರ್ಭದಲ್ಲಿ ಇಬ್ರಾಹಿಂ ಸಾಬ ದೇಗಲಮಡಿ, ಅಲ್ಲಾವುದ್ದಿನ್ ಅನ್ಸಾರಿ, ರಾಜಕುಮಾರ ಮಂದಾ, ಚಂದ್ರಕಾಂತ ತಳವಾರ, ಶರಣು ಪಪ್ಪ, ಶಿವಕುಮಾರ್ ಮುಲ್ಗೆ, ಆಸೀಫ ಹುಡಾ, ಖಾಜಾ ಪಾಟೇಲ, ನಂದಕುಮಾರ ಆವುಂಟಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News