ಡಾ. ಅಜಯ್ ಸಿಂಗ್ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ
ಅಬ್ದುಲ್ ರಜಾಕ್ ಮನಿಯರ್
ಯಡ್ರಾಮಿ: ಜೇವರ್ಗಿ ಕ್ಷೇತ್ರದ ಶಾಸಕ ಡಾ. ಅಜಯ ಸಿಂಗ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಮಾಜಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಅಬ್ದುಲ್ ರಜಾಕ್ ಮನಿಯರ್ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಡಾ. ಅಜಯ ಸಿಂಗ್ ಅವರು ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರ ಪುತ್ರರಾಗಿದ್ದು, ವಿಶೇಷ ಪ್ರತಿನಿಧಿ, ಮುಖ್ಯ ಸಚೇತಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.
ಜನಪರ ನಾಯಕತ್ವ, ಆಡಳಿತಾತ್ಮಕ ಅನುಭವ ಹಾಗೂ ಅಭಿವೃದ್ಧಿ ಪರ ಚಿಂತನೆಯ ಮೂಲಕ ಅವರು ಜೇವರ್ಗಿ ಕ್ಷೇತ್ರ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸಚಿವ ಸ್ಥಾನ ನೀಡುವುದು ಸೂಕ್ತವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಡಾ. ಅಜಯ್ ಸಿಂಗ್ ಅವರಿಗೆ ಸಚಿವ ಸ್ಥಾನ ನೀಡಿದಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ದೊರೆಯಲಿದ್ದು, ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಗಳನ್ನು ಈಡೇರಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಆದ್ದರಿಂದ ನೂತನ ಸಚಿವ ಸಂಪುಟದಲ್ಲಿ ಡಾ. ಅಜಯ್ ಸಿಂಗ್ ಅವರಿಗೆ ಸೂಕ್ತ ಸ್ಥಾನಮಾನ ನೀಡಿ ಸಚಿವರನ್ನಾಗಿ ನೇಮಕ ಮಾಡಬೇಕು ಎಂದು ಅಬ್ದುಲ್ ರಜಾಕ್ ಮನಿಯರ್ ಒತ್ತಾಯಿಸಿದ್ದಾರೆ.