×
Ad

ಕಲಬುರಗಿ | ದೇವದಾಸಿ ಮಹಿಳೆಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ

Update: 2025-02-19 21:20 IST

ಕಲಬುರಗಿ: ದೇವದಾಸಿ ಮಹಿಳೆಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉತ್ತರ ಕರ್ನಾಟಕ ರಾಜ್ಯ ಘಟಕ ನಿರ್ಗತಿಕ ಮಹಿಳೆಯರ ಮತ್ತು ದೇವದಾಸಿಯರ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ರಾಜ್ಯದ 15 ಜಿಲ್ಲೆಗಳಲ್ಲಿ 1982 ಮತ್ತು 1994ರಲ್ಲಿ ದೇವದಾಸಿ ಮಹಿಳೆಯರನ್ನು ಸಮೀಕ್ಷೆ ಮಾಡುವಾಗ ತಾರತಮ್ಯವಾಗಿದ್ದು, ಇದನ್ನು ಸರಿಪಡಿಸಬೇಕು. ಸರ್ಕಾರ ಸಮೀಕ್ಷೆ (ಜಾತಿ ಗಣತಿ ಸಮೀಕ್ಷೆಯಲ್ಲಿ) ದೇವದಾಸಿ ಮಹಿಳೆಯರ ದೃಢೀಕರಣಮಂಡಿಸಬೇಕು 2ನೇ ಮರು ಸಮೀಕ್ಷೆ ಮಾಡುವಾಗ ದೇವದಾಸಿ ಮಹಿಳೆಯರಿಗೆ 2 ತಿಂಗಳ ಕಾಲಾವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದ್ದರು.

ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಅಂಬಣ್ಣ ಕಿಣಗಿಕರ್, ವಿಭಾಗೀಯ ಅಧ್ಯಕ್ಷೆ ಬಸಮ್ಮ ಆಲೂಕುಂಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಜೈರಾಜ ಕಿಣಗಿಕರ, ಜಿಲ್ಲಾ ಅಧ್ಯಕ್ಷೆ ಸರಸ್ವತಿ ಹೊಸಮನಿ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News