ಚಿತ್ತಾಪುರ: ಪಟ್ಟಣದ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಕೃಷಿ ಇಲಾಖೆ ಸಹಯೋಗದಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಬಳಿಕ ಮಾತನಾಡಿದ ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ನಾಗರೆಡ್ಡಿ ಗೋಪಸೆನ್, ರೈತರು ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಪಡೆದುಕೊಂಡು, ಜಮೀನಿನಲ್ಲಿ ತೇವಾಂಶವನ್ನು ಪರಿಶೀಲಿಸಿದ ಬಳಿಕ ಬಿತ್ತನೆ ಕೈಗೊಳ್ಳಬೇಕು. ಹನಿ ನೀರಾವರಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ರೈತ ಮುಖಂಡರು ಭಾಗವಹಿಸಿ, ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ಕೃಷಿಗೆ ಸಂಬಂಧಿಸಿದ ಅಗತ್ಯ ಮಾಹಿತಿಯನ್ನು ಒದಗಿಸುವ ಕುರಿತು ಮಾತನಾಡಿದರು.

ಕೃಷಿ ಚಟುವಟಿಕೆಗಳಿಗೆ ಸಮಯೋಚಿತವಾಗಿ ಬಿತ್ತನೆ ಬೀಜ ಸೇರಿದಂತೆ ಅಗತ್ಯ ಕೃಷಿ ಪರಿಕರಗಳು ದೊರೆಯುವುದರಿಂದ ರೈತರಿಗೆ ಅನುಕೂಲವಾಗಲಿದೆ. ರೈತರು ಕೃಷಿ ಇಲಾಖೆಯ ವಿವಿಧ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ವೈಜ್ಞಾನಿಕ ಪದ್ಧತಿಯಲ್ಲಿ ಕೃಷಿ ಕೈಗೊಳ್ಳಬೇಕು ಎಂದು ಅಧಿಕಾರಿಗಳು ತಿಳಿಸಿದರು.

ಇದೇ ವೇಳೆ ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜದ ಚೀಲಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಟಿಎಪಿಎಂ'ಸಿ ಅಧ್ಯಕ್ಷ ದೇವಿಂದ್ರ ಅಣಕಲ್, ಕೃಷಿ ಸಮಾಜದ ಸದಸ್ಯರಾದ ನಿಂಗಣ್ಣ ಹೇಗಲೇರಿ, ಬಾಬು ಕಾಶಿ, ಶಾಮರಾವ ಸಂಗಾವಿ, ರವೀಂದ್ರಕುಮಾರ್, ಬಸವರಾಜ ಭಂಕಲಗಿ, ಕರಣಕುಮಾರ್, ಸಚಿನ್ ಕುಮಾರ್ ಸೇರಿದಂತೆ ಕೃಷಿ ಇಲಾಖೆ ಅಧಿಕಾರಿಗಳು, ರೈತ ಮುಖಂಡರು ಹಾಗೂ ಹಲವಾರು ರೈತರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor