×
Ad

ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಭೇಟಿ

Update: 2025-03-03 19:48 IST

ಕಲಬುರಗಿ: ಪ್ರಸಕ್ತ 2024-25ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಆರಂಭಗೊಂಡಿದ್ದು, ಸೋಮವಾರ ನಗರದ ಸೂಪರ್ ಮಾರ್ಕೆಟ್ ಪ್ರದೇಶದ ಎಂ.ಪಿ.ಎಚ್.ಎಸ್ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಭೇಟಿ ನೀಡಿ ಪರಿಶೀಲಿಸಿದರು.

ಕೇಂದ್ರದ ಪ್ರತಿ ಕೋಣೆಗೆ ಭೇಟಿ ನೀಡಿದ ಅವರು, ಯಾವುದೇ ರೀತಿಯಲ್ಲಿ ನಕಲಿಗೆ ಇಲ್ಲಿ ಅವಕಾಶ ನೀಡಬಾರದು. ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು, ಕಡ್ಡಾಯಾಗಿ ಪ್ರಿಸ್ಕಿಂಗ್ ಮಾಡಬೇಕೆಂದು ಕೊಠಡಿ ಮೇಲ್ವಿಚಾರಕರಿಗೆ ಸೂಚಿಸಿದರು.

ನಂತರ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳ ಮೇಲೆ ಇದೇ ಪ್ರಥಮ ಬಾರಿಗೆ ವೆಬ್ ಕಾಸ್ಟಿಂಗ್ ಮೂಲಕ ನಿಗಾ ಇಡಲು ಸ್ಥಾಪಿಸಿರುವ ಮಾನಿಟರ್ ರೂಂಗೆ ಭೇಟಿ ನೀಡಿದ ಡಿ.ಸಿ. ಅವರು, ಅಲ್ಲಿನ ಸಿಬ್ಬಂದಿಯಿಂದ ಕೇಂದ್ರದ ಕಾರ್ಯವೈಖರಿ ಕುರಿತು ಮಾಹಿತಿ ಪಡೆದರು. 51 ಪರೀಕ್ಷಾ ಕೇಂದ್ರಗಳ 765 ಕೊಠಡಿಯಲ್ಲಿ 1,284 ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸಿದ್ದು, ಮಾನಿಟರ್ ರೂಂ ನಿಂದಲೇ ಪ್ರತಿ ಕೇಂದ್ರದ ಪರೀಕ್ಷಾ ಕೋಣೆಗಳನ್ನು ನೇರವಾಗಿ ವೀಕ್ಷಿಸಬಹುದಾಗಿದೆ ಎಂದು ಸಿಬ್ಬಂದಿಗಳು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News