×
Ad

ಎ.16 ರಂದು ಕಲಬುರಗಿಯಲ್ಲಿ ನಡೆಯಲಿರುವ ಉದ್ಯೋಗ ಮೇಳದ ಸದುಪಯೋಗ ಪಡೆಯಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮನವಿ

Update: 2025-04-07 16:18 IST

ಬೀದರ್ : ಎ.16 ರಂದು ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ ನಡೆಯುತ್ತಿದ್ದು, ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಎ.10 ರವರೆಗೆ ಆನ್‍ಲೈನ್ ಮೂಲಕ ಹೆಸರು ನೋಂದಾಯಿಸಿಕೊಳ್ಳುವ ಈ ಉದ್ಯೋಗ ಮೇಳದ ಸದುಪಯೋಗ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.

ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೌಶಾಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಎ.16 ರಂದು ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಕಲಬುರಗಿಯಲ್ಲಿ ಪ್ರಾದೇಶಿಕ ಬೃಹತ ಉದ್ಯೋಗ ಮೇಳ ಇದಾಗಿದೆ. ನಿರುದ್ಯೋಗ ಯುವ ಜನಾಂಗಕ್ಕೆ ಹಾಗೂ ಉದ್ಯೋಗಾಂಕ್ಷಿಗಳಿಗೆ ನೆರವಾಗಲು ಸರ್ಕಾರ ಕ್ರಮಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಅಭ್ಯರ್ಥಿಗಳು ಹಾಗೂ ಯುವ ನಿಧಿ ಯೋಜನೆಯಡಿ ಲಾಭ ಪಡೆಯುತ್ತಿರುವ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದ ಲಾಭ ಪಡೆಯಬೇಕು ಎಂದರು.

ಇಂದಿನವರೆಗೆ ಜಿಲ್ಲೆಯಲ್ಲಿ 745 ಆಭ್ಯರ್ಥಿಗಳು ಅನ್‌ಲೈನ್ ಮೂಲಕ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈಗಾಗಲೇ ಉದ್ಯೋಗ ಮೇಳದಲ್ಲಿ ಒಟ್ಟು 201 ಕಂಪನಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ ಅವರು, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಎಸೆಸೆಲ್ಸಿ, ಐಟಿಐ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ನಿರುದ್ಯೋಗ ಯುವಕ, ಯುವತಿಯರಿಗೆ ವಿವಿಧ ಪ್ರತಿಷ್ಠಿತ ಕಂಪನಿ, ಸಂಸ್ಥೆಗಳಲ್ಲಿ ಉದ್ಯೋಗ ಪಡೆಯಲು ಇದೊಂದು ಸುವರ್ಣ ಅವಕಾಶವಾಗಿದ್ದು, ಪ್ರತಿಯೊಬ್ಬರು ವೆಬ್‍ಸೈಟ್ www.skillconnect.koushalkar.comನಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಂಡು ಈ ಬೃಹತ್ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ್ ಶಾಬಾದಕರ್, ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ.ದೇವೇಂದ್ರ ಹಂಚಿ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸೇರಿದಂತೆ ವಿವಿಧ ಕಾಲೇಜಿನ ಪ್ರಾಂಶುಪಾಲರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News