ಉತ್ತರಾಖಂಡದಲ್ಲಿ ಮೇಘಸ್ಫೋಟ: ಕಲಬುರಗಿ ಜಿಲ್ಲೆಯ ಪ್ರವಾಸಿಗರಿಗೆ ಸಹಾಯವಾಣಿ ಪ್ರಾರಂಭಿಸಿದ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್
Update: 2025-08-06 22:29 IST
ಕಲಬುರಗಿ: ಉತ್ತರಾಖಂಡದ ಉತ್ತರಕಾಶಿ ಬಳಿ ಮೇಘಸ್ಫೋಟದಿಂದ ದಿಢೀರ್ ಪ್ರವಾಹ, ಭೂಕುಸಿತ ಸಂಭವಿಸಿ ಹಲವರು ಮೃತಪಟ್ಟಿದ್ದಾರೆ. ಹಲವರು ನಾಪತ್ತೆಯಾಗಿದ್ದಾರೆ. ಆದ್ದರಿಂದ ಕಲಬುರಗಿ ಜಿಲ್ಲೆಯಿಂದ ಉತ್ತರಕಾಶಿಗೆ ಪ್ರವಾಸಕ್ಕೆ ತೆರಳಿ ಪ್ರವಾಹದಲ್ಲಿ ಸಿಲುಕಿದ್ದವರ ಕುರಿತು ಮಾಹಿತಿ ಇದ್ದರೆ ಸಹಾಯವಾಣಿಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ತಿಳಿಸಿದ್ದಾರೆ.
ಸಂಪರ್ಕಿಸಬೇಕಾದ ಸಂಖ್ಯೆ :
ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ- 08472-278677 ಮತ್ತು ಪೊಲೀಸ್ ಕಂಟ್ರೋಲ್ ಸಂಖ್ಯೆ 9480805500, 9480803500, 08472-263604, 228112ಗೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್ ಅವರು ತಿಳಿಸಿದ್ದಾರೆ.