ಕಲಬುರಗಿ: ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಡಾ. ಕಿರಣ್ ದೇಶಮುಖ ಅವರನ್ನು ನೇಮಕ ಮಾಡಲಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿ ಹಲವು ವರ್ಷಗಳಿಂದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ ಡಾ. ಕಿರಣ್ ದೇಶಮುಖ ಅವರು ಪಕ್ಷ ಸಂಘಟನೆಯನ್ನು ಬಲಪಡಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿರುವ ಅವರು, ಎನ್‌ಎಸ್‌ಯುಐ, ಯುವ ಕಾಂಗ್ರೆಸ್, ಕೆಪಿಸಿಸಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ.

ಪಕ್ಷದ ವಿವಿಧ ಘಟಕಗಳಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ಅವರ ನೇಮಕದಿಂದ ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಗೆ ಮತ್ತಷ್ಟು ಚೈತನ್ಯ ಮತ್ತು ಬಲ ಸಿಗಲಿದೆ ಎಂಬ ನಿರೀಕ್ಷೆ ಪಕ್ಷದ ಕಾರ್ಯಕರ್ತರಲ್ಲಿ ವ್ಯಕ್ತವಾಗಿದೆ.

ಡಾ. ಕಿರಣ್ ದೇಶಮುಖ ಅವರ ನೇಮಕಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor