ಕಲಬುರಗಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮೆಡಿಕಲ್ ಶಾಪ್
Update: 2025-02-01 13:19 IST
ಕಲಬುರಗಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮೆಡಿಕಲ್ ಶಾಪ್ ವೊಂದು ಹೊತ್ತಿ ಉರಿದಿರುವ ಘಟನೆ ಶುಕ್ರವಾರ ರಾತ್ರಿ ನಗರದ ಹೀರಾಪುರ ರಸ್ತೆಯಲ್ಲಿ ನಡೆದಿದೆ.
ಹೊತ್ತಿ ಉರಿದ ಮೆಡಿಕಲ್ ಶಾಪ್ ವಿನೋದ್ ಎಂಬುವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಶುಕ್ರವಾರ ರಾತ್ರಿ ಮೆಡಿಕಲ್ ಬಂದ್ ಮಾಡಿಕೊಂಡು ಮನೆಗೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.