ವಾಡಿ: ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 24ರಂದು ಮಧ್ಯಾಹ್ನ 12 ಗಂಟೆಗೆ ನಗರದ ಸಾಹೇಬ್ ಫಂಕ್ಷನ್ ಹಾಲ್‌ನಲ್ಲಿ ಪೌರಕಾರ್ಮಿಕರ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಸೇಡಂ ಉಪ ವಿಭಾಗೀಯ ಸಹಾಯಕ ಆಯುಕ್ತ ಪ್ರಭು ರೆಡ್ಡಿ ಉದ್ಘಾಟಿಸಲಿದ್ದು, ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸೈಯದ್ ಮೆಹಮೂದ್ ಚಿಸ್ತಿ ಸಾಹೇಬ್ ಘನ ಉಪಸ್ಥಿತರಿರಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕಲಬುರಗಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮುನಾವರ ದೌಲಾ, ಚಿಂಚೋಳಿ ಪುರಸಭೆ ಮುಖ್ಯಾಧಿಕಾರಿ ಕಾಶೀನಾಥ ಧನ್ನಿ, ಪರಿಸರ ಅಭಿಯಂತರ ಪೂಜಾ ಫುಲಾರೆ, ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಸುಲೇಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಹಾರಕೂಡ ಹಾಗೂ ಸ್ಥಳೀಯ ಅಧ್ಯಕ್ಷ ಶಿವಾನಂದ ನಿಂಬರ್ಗಾ ಭಾಗವಹಿಸಲಿದ್ದಾರೆ.

ಪೌರಕಾರ್ಮಿಕರ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಆಯೋಜಿಸಿರುವ ಈ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೌರಕಾರ್ಮಿಕರು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಮುಖ್ಯಾಧಿಕಾರಿ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor