ಜೇವರ್ಗಿಯಲ್ಲಿ ಪ್ರವಾಹ ಪರಿಸ್ಥಿತಿ : ಕಟ್ಟಿ ಸಂಗಾವಿ ಸೇತುವೆ ವೀಕ್ಷಿಸಿದ ಶಾಸಕ ಅಜಯ್ ಸಿಂಗ್
Update: 2025-09-27 17:00 IST
ಕಲಬುರಗಿ: ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಜೇವರ್ಗಿ ತಾಲೂಕಿನ ವಿವಿಧ ಗ್ರಾಮಗಳಿಗೆ ಕೆಕೆಆರ್ ಡಿಬಿ ಅಧ್ಯಕ್ಷ, ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಮತ್ತು ಸುತ್ತ ಮುತ್ತಲಿನ ಪ್ರದೇಶದಲ್ಲಿ ಅತಿಯಾದ ಮಳೆ ಮತ್ತು ತೀವ್ರ ಪ್ರವಾಹದಿಂದಾಗಿ ಹಾನಿಗೊಳಗಾದ ಸ್ಥಳಗಳನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು.
ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ನಾಗರೀಕರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮತ್ತು ಹಾನಿಗೊಳಗಾದ ಬೆಳೆಗಳ ಬಗ್ಗೆ ಮಾಹಿತಿ ನೀಡಲು ಹಾಗೂ ಪರಿಹಾರದ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಗ್ರಾಮಗಳ ಗ್ರಾಮಸ್ಥರು ಇದ್ದರು.