×
Ad

ಬಸವೇಶ್ವರ ಬೋಧನಾ, ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

Update: 2024-12-02 09:51 IST

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರಿಗಾಗಿ “ಕಾಮಲೆ ರೋಗ ಮತ್ತು ಯಕೃತ (ಲಿವರ್)” ಸಂಬಂಧಿತ ಕಾಯಿಲೆಗಳನ್ನು ಪತ್ತೆ ಹಚ್ಚುವ ಉಚಿತ ಆರೋಗ್ಯ ತಪಸ್ಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಇಂದು (ಸೋಮವಾರ) ಹಮ್ಮಿಕೊಳ್ಳಲಾಗಿದೆ. ಸಮಯ ಬೆಳಗ್ಗೆ 9 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಉಸಿರಾಟದ ತೊಂದರೆ, ಹೃದಯ ಸಂಬಂಧಿತ ಸಮಸ್ಯೆಗಳು, ರಕ್ತಹೀನತೆ ಸಮಸ್ಯೆ, ಸಕ್ಕರೆ ಕಾಯಿಲೆ,ಅಧಿಕ ರಕ್ತದೊತ್ತಡ, ಅಸ್ತಮಾ,ಟಿ.ಬಿ,ಕಾಮಲೆ, ನರರೋಗ ಇನ್ನಿತರ ಸಾಮಾನ್ಯ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿತ ಕಾಯಿಲೆಗಳಿಗೆ ಆಸ್ಪತ್ರೆಯ ಆಯಾ ವಿಭಾಗದ ಪರಿಣಿತ ವೈದ್ಯರು ತಪಾಸನೆ ನಡೆಸಲಿದ್ದಾರೆ. ಹಾಗಾಗಿ ಸಾರ್ವಜನಿಕರು ಈ ಶಿಬಿರದಲ್ಲಿ ಪಾಲ್ಗೊಂಡು ಉಚಿತ ತಪಾಸಣೆ ಮಾಡಿಸಿಕೊಳ್ಳಲು ಸೂಚಿಸಲಾಗಿದೆ.

ಆಸ್ಪತ್ರೆಯ ಒಳರೋಗಿಯಾಗಿ ಭರ್ತಿಯಾದ ರೋಗಿಗಳಿಗೆ ಉಚಿತ ನೊಂದಣಿ, ತಪಾಸಣೆ, ಸಲಹೆ, ಔಷಧೋಪಚಾರ, ಅವಶ್ಯಕ ರಕ್ತ ಪರೀಕ್ಷೆ (HB, Urine Routine, Blood Group, RBS, HBSAG, HIV) (Ultra Sound) - (X-RAY) ತಪಾಸಣೆಯನ್ನು ಉಚಿತವಾಗಿ ಬಸವೇಶ್ವರ ಆಸ್ಪತ್ರೆಯಲ್ಲಿ ಮಾಡಲಾಗುವದು.

ಉಚಿತ ತಪಾಸಣಾ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶಶೀಲ್.ಜಿ.ನಮೋಶಿ, ಉಪಾಧ್ಯಕ್ಷರಾದ ರಾಜಾ ಭೀಮಳ್ಳಿ ಮತ್ತು ಕಾರ್ಯದರ್ಶಿಗಳಾದ ಉದಯ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ.ಕೈಲಾಶ್ ಪಾಟೀಲ್, ಬಸವೇಶ್ವರ ಭೋದನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಸಂಚಾಲಕರಾದ ಡಾ. ಕಿರಣ್ ದೇಶಮುಖ್ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು, ಮಹಾದೇವಪ್ಪಾ ರಾಂಪೂರೆ ವೈದ್ಯಕೀಯ ಮಹಾವಿಧ್ಯಾಲಯದ ಡೀನ್‌ರಾದ ಡಾ.ಶರಣಗೌಡ ಪಾಟೀಲ್, ಬಸವೇಶ್ವರ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಆನಂದ ಗಾರಂಪಳ್ಳಿ, ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ.ಸುರೇಶ ಹರಸೂರ ತಿಳಿಸಿದ್ದಾರೆ ಎಂದು ಮಾಧ್ಯಮ ಸಂಯೋಜಕ ಐ ಕೆ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News