ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಕಲಬುರಗಿಯಲ್ಲಿ ಅದ್ಧೂರಿ ಸ್ವಾಗತ
ತೆರೆದ ವಾಹನದಲ್ಲಿ ಭವ್ಯ ಮೆರವಣಿಗೆ; ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸನ್ಮಾನ
Update: 2026-07-05 18:26 IST
ಕಲಬುರಗಿ: ಗೃಹ ಸಚಿವರಾಗಿ ಮೊದಲ ಬಾರಿಗೆ ಕಲಬುರಗಿ ನಗರಕ್ಕೆ ಆಗಮಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು ಭವ್ಯ ಸ್ವಾಗತ ಕೋರಿದರು.
ನಗರದ ಗಂಜ್ ಪ್ರದೇಶದ ನಗರೇಶ್ವರ ಶಾಲೆ ಸಮೀಪ ಸಚಿವರನ್ನು ಅಪಾರ ಸಂಖ್ಯೆಯ ಕಾರ್ಯಕರ್ತರು ಬರಮಾಡಿಕೊಂಡರು. ಬಳಿಕ ತೆರೆದ ವಾಹನದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಭವ್ಯ ಮೆರವಣಿಗೆ ನಡೆಸಿ ಜಿಲ್ಲಾ ಕಾಂಗ್ರೆಸ್ ಕಚೇರಿವರೆಗೆ ಕರೆತರಲಾಯಿತು.
ಮೆರವಣಿಗೆಯುದ್ದಕ್ಕೂ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಸಚಿವರಿಗೆ ಅಭಿನಂದನೆ ಸಲ್ಲಿಸಿದರು. ಬಳಿಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.