×
Ad

ಗುಲ್ಬರ್ಗಾ ವಿವಿಯ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವಕ್ಕೆ ತೆರೆ

Update: 2025-12-22 21:51 IST

ಕಲಬುರಗಿ: 2025-26ನೇ ಸಾಲಿನ ಗುಲ್ಬರ್ಗಾ ವಿಶ್ವವಿದ್ಯಾಲಯದ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವಕ್ಕೆ ಸೋಮವಾರ ತೆರೆ ಬಿದ್ದಿದೆ.

ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಝಹೀರಾ ನಸೀಮ್ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗವು ಕಲೆ, ಸಂಸ್ಕೃತಿ, ಸಾಹಿತ್ಯ ಮತ್ತು ಐತಿಹಾಸಿಕ ಪರಂಪರೆಯನ್ನು ಹೊಂದಿದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಲ್ಲಿ ಕ್ರಿಯಾಶೀಲತೆಯಿಂದ ಭಾಗವಹಿಸಬೇಕು ಎಂದರು.

ಉನ್ನತ ಮಟ್ಟದ ಸಾಧನೆಯನ್ನು ಮಾಡಲು ಸಹನೆ, ತಾಳ್ಮೆ, ಅತೀವ ಆಸಕ್ತಿ ಅಗತ್ಯವಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಾಲಹರಣ ಮಾಡಬೇಡಿ. ದೇಶಕ್ಕೆ ಮತ್ತು ಸಮಾಜಕ್ಕೆ ಏನಾದರು ಕೊಡುಗೆಯನ್ನು ನೀಡಲು ನಿರ್ಧರಿಸಿ ಧೃಡ ಸಂಕಲ್ಪವನ್ನು ಮಾಡಬೇಕು ಎಂದು ಸಲಹೆ ನೀಡಿದರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಶಶಿಕಾಂತ ಉಡಿಕೇರಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ವರ್ಷದ ಯುವಜನೋತ್ಸವದಲ್ಲಿ 25ಕ್ಕಿಂತ ಹೆಚ್ಚಿನ ಕಾಲೇಜಿನ ಸುಮಾರು 500 ಸ್ಪರ್ಧಿಗಳು ಭಾಗವಹಿಸಿದ್ದು, ತಮ್ಮೆಲ್ಲರ ಸಹಕಾರದಿಂದ ಗುಲ್ಬರ್ಗಾ ವಿಶ್ವವಿದ್ಯಾಲಯ ಯುವಜನೋತ್ಸವ ಇಂಡಿಯಾ ಬುಕ್ ಆಪ್ ರೆಕಾರ್ಡ್ ನಲ್ಲಿ ದಾಖಲೆ ಮಾಡಿದೆ ಎಂದು ಹೇಳಿದರು.

ಕುಲಸಚಿವ ಪ್ರೊ.ರಮೇಶ್ ಲಂಡನಕರ್ ಯುವಜನೋತ್ಸವ ವರದಿ ಮಂಡಿಸಿದರು. ಗ್ರಂಥಾಲಯದ ಗ್ರಂಥಪಾಲಕ ಡಾ.ಸುರೇಶ್ ಜಂಗೆ ಅತಿಥಿಗಳನ್ನು ಸ್ವಾಗತಿಸಿದರು. ಜೊತೆಗೆ ಗುಲಬರ್ಗಾ ವಿಶ್ವವಿದ್ಯಾಲಯ 2025-26ನೇ ಸಾಲಿನ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವ ಇಂಡಿಯನ್ ಬುಕ್ ಅಪ್ ರೆಕಾರ್ಡ್‌ಗೆ ಸೇರಲ್ಪಟ್ಟಿರುವ ಪ್ರತಿಯನ್ನು ಮಂಡಿಸಿದರು.

ಮೌಲ್ಯಮಾಪನ ವಿಭಾಗದ ಕುಲಸಚಿವ ಡಾ.ಎನ್.ಜಿ. ಕಣ್ಣೂರು, ವಿತ್ತ ಅಧಿಕಾರಿಗಳಾದ ಜಯಂಬಿಕಾ, ಸಂಶೋಧನ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಆನಂದ ಮೇತ್ರಿ, ಸಿಂಡಿಕೇಟ್ ಸದಸ್ಯರು ಎಲ್ಲ ವಿಭಾಗದ ಡೀನರುಗಳು, ಪ್ರಾಧ್ಯಾಪಕರು ಬೋಧಕ ಮತ್ತು ಭೋಧಕೇತರ ಸಿಬ್ಬಂಧಿಗಳು,  ಶಾಲಾ ಕಾಲೇಜುಗಳು ವಿದ್ಯಾರ್ಥಿಗಳು,  ಸಿಬ್ಬಂಧಿಗಳು ಭಾಗವಹಿಸಿದ್ದರು.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News