ಅಫಜಲಪುರ: ಹೃದಯಾಘಾತದಿಂದ ಹೆಡ್ ಕಾನ್ಸ್ಟೇಬಲ್ ಚಂದ್ರಕಾಂತ್ ಇಟಗೊಂಡ ನಿಧನ
Update: 2026-01-01 00:08 IST
ಅಫಜಲಪುರ: ಮಾದನ ಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಚಂದ್ರಕಾಂತ್ ಇಟಗೊಂಡ (ಎಚ್‌ಸಿ–53) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
2008ನೇ ಬ್ಯಾಚ್‌ನ ಪೊಲೀಸ್ ಪೇದೆಯಾಗಿರುವ ಚಂದ್ರಕಾಂತ್ ಇಟಗೊಂಡ ಅವರು ಅಫಜಲಪುರ ತಾಲೂಕಿನ ಗೊಬ್ಬುರ್ (ಬಿ) ಗ್ರಾಮದ ನಿವಾಸಿಯಾಗಿದ್ದಾರೆ, ಅಫಜಲಪುರ ಪಟ್ಟಣದಲ್ಲಿ ಸ್ವಂತ ಮನೆ ಮಾಡಿಕೊಂಡು ಕುಟುಂಬ ಸಮೇತ ವಾಸವಾಗಿದ್ದರು. ಕಳೆದ ಒಂದು ವರ್ಷದಿಂದ ಅವರು ಆಳಂದ ತಾಲೂಕಿನ ಮಾದನ ಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಮಂಗಳವಾರ ರಾತ್ರಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಮಧ್ಯರಾತ್ರಿ ವೇಳೆಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಅಫಜಲಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.