×
Ad

ಕಲಬುರಗಿಯಲ್ಲಿ ಭಾರೀ ಮಳೆ: ಬೃಹತ್ ಬಂಡೆ ಕಲ್ಲು ಬಿದ್ದು ಮನೆ ಧ್ವಂಸ

Update: 2024-09-02 13:47 IST

ಕಲಬುರಗಿ: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮನೆಯ ಮೇಲೆ ಬೃಹತ್ ಗಾತ್ರದ ಕಲ್ಲು ಬಂಡೆ ಕುಸಿದು ಅಪಾರ ಹಾನಿಯಾಗಿರುವ ಘಟನೆ ಚಿತ್ತಾಪುರ ತಾಲೂಕಿನ ಅಲ್ಲೂರು ಬಿ ಗ್ರಾಮದಲ್ಲಿ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಇಲ್ಲಿನ ಅಲ್ಲೂರು ಬಿ ಗ್ರಾಮದಲ್ಲಿನ ಚನ್ನಪ್ಪ ಬೋಳಿ ಎಂಬವರ ಮನೆಯ ಮೇಲೆ ಪಕ್ಕದ ಗುಡ್ಡದಲ್ಲಿದ್ದ ದೊಡ್ಡ ಗಾತ್ರದ ಬಂಡೆಕಲ್ಲುಗಳು ಉರುಳಿಬಿದ್ದಿವೆ. ಈ ವೇಳೆ ಮನೆಯಲ್ಲಿದ್ದ ಬಾಲಕನೋರ್ವನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಬಂಡೆಕಲ್ಲು ಬಿದ್ದು ಮನೆ ಸಂಪೂರ್ಣ ಧ್ವಂಸಗೊಂಡಿದ್ದು, ಮನೆಯೊಳಗಿದ್ದ ಸಾಮಗ್ರಿಗಳೆಲ್ಲ ನಾಶವಾಗಿವೆ. ಮನೆಯಲ್ಲಿದ್ದ ಧವಸ ಧಾನ್ಯಗಳು ಮಣ್ಣುಪಾಲಾಗಿವೆ. ಇದರಿಂದ ಸುಮಾರು ಏಳು ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.

ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಪೊಲೀಸ್ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News