ಕಲಬುರಗಿ | ಬಿಗಿಪೊಲೀಸ್ ಬಂದೋಬಸ್ತ್ ನಲ್ಲಿ ಆಳಂದ ದರ್ಗಾದ ಆವರಣಲ್ಲಿರುವ ಶಿವಲಿಂಗಕ್ಕೆ ಪೂಜೆ
Update: 2025-02-26 18:17 IST
ಕಲಬುರಗಿ: ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿ ಇರುವ ರಾಘವ ಚೈತನ್ಯ ಶಿವಲಿಂಗಕ್ಕೆ ಬುಧವಾರ ಮಧ್ಯಾಹ್ನ ಹಿಂದುತ್ವ ಸಂಘಟನೆ ಮುಖಂಡರು ಪೂಜೆ ಸಲ್ಲಿಸಿದರು.
ಕಡಗಂಚಿ ಮಠದ ಶ್ರೀ ವೀರಭದ್ರ ಶಿವಾಚಾರ್ಯರ, ಲಿಂಗರಾಜಪ್ಪ ಅಪ್ಪ, ಸಿದ್ರಾಮಯ್ಯ ಹಿರೇಮಠ್, ಹರ್ಷಾನಂದ ಗುತ್ತೇದಾರ್, ಸಂತೋಷ್ ಹಾದಿಮನಿ, ಶಿವರಾಜ್ ಪಾಟೀಲ್ ರದ್ದೇವಾಡಗಿ, ಆನಂದ್ ಪಾಟೀಲ್ ಸೇರಿದಂತೆ ಕಲಬುರಗಿ ಹೈಕೋರ್ಟ್ ಪೀಠದ ಆದೇಶದಂತೆ ಹತ್ತು ಜನರು ದರ್ಗಾದ ಆವರಣದಲ್ಲಿ ಶಿವಲಿಂಗಕ್ಕೆ ಪೂಜೆ ಸಲ್ಲಿಸಿದರು.
ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಆಳಂದ ಪಟ್ಟಣದಾದ್ಯಂತ 144 ಸೆಕ್ಷನ್ ಅಡಿ ನಿಷೇಧಾಜ್ಞೆ ವಿಧಿಸಲಾಗಿತ್ತು. ಪಟ್ಟಣ ಮತ್ತು ದರ್ಗಾದ ಸುತ್ತಮುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿದ್ದರು.