×
Ad

ನಾನೂ ಸಚಿವ ಸ್ಥಾನದ ಆಕಾಂಕ್ಷಿ, ಶೀಘ್ರದಲ್ಲೇ ಅದು ಈಡೇರಲಿದೆ: ಡಾ.ಅಜಯ್ ಸಿಂಗ್

Update: 2025-09-14 11:18 IST

ಕಲಬುರಗಿ: 2018ರಿಂದಲೇ ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಅದು ಶೀಘ್ರದಲ್ಲೇ ಈಡೇರಲಿದೆ ಎಂದು ಕೆಕೆಆರ್ ಡಿಬಿ ಅಧ್ಯಕ್ಷ, ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಪುನರುಚ್ಚರಿಸಿದ್ದಾರೆ.

ನಗರದ ಐವಾನ್ ಎ ಶಾಹಿ ಅತಿಥಿಗೃಹದ ಸಮೀಪದ ಕೆಕೆ ಆರ್ ಡಿಬಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ ತಿಂಗಳಲ್ಲಿ ಸಚಿವ ಸಂಪುಟ ಪುನರ್ ರಚನೆ ಆಗುವುದು ಖಚಿತ, ಇದು ದಿಲ್ಲಿಯಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯಲಿದೆ. ಈ ಸಲ ಮಂತ್ರಿಯಾಗಲಿದ್ದೇನೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಕೆಕೆ ಆರ್ ಡಿಬಿ ಅಧ್ಯಕ್ಷನಾಗಿ, ಶಾಸಕನಾಗಿ ಹಲವು ಅಭಿವೃದ್ಧಿ, ಜನಪರ ಕೆಲಸಗಳನ್ನು ಮಾಡಿದ್ದೇನೆ. ಇದೆಲ್ಲ ಹೈಕಮಾಂಡ್ ಗುರುತಿಸುತ್ತಿದೆ. ಹೈಕಮಾಂಡ್ ನಿರ್ಧಾರಕ್ಕೆ ಕಾದು ನೋಡೋಣ ಎಂದರು.

ಸೆ.17 ರಂದು ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News