×
Ad

ಅಶೋಕ, ವಿಜಯೇಂದ್ರರಿಗೆ ಕಿಂಚಿತ್ ನಾಚಿಕೆ ಉಳಿದುಕೊಂಡಿದ್ದರೆ ರಾಜೀನಾಮೆ ನೀಡಲಿ : ಸಚಿವ ಪ್ರಿಯಾಂಕ್ ಖರ್ಗೆ

Update: 2025-07-21 18:52 IST

ಪ್ರಿಯಾಂಕ್ ಖರ್ಗೆ

ಕಲಬುರಗಿ: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಈಡಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿನ ಪ್ರತಿ ಪಕ್ಷದ ನಾಯಕರಾದ ಆರ್.ಅಶೋಕ್‌ ಮತ್ತು ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಲ್ಲಿ ಕಿಂಚಿತ್ತು ನಾಚಿಕೆ ಎನ್ನುವುದು ಉಳಿದಿದ್ದರೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಿಯಾಂಕ್ ಖರ್ಗೆ, ಕರ್ನಾಟಕದ ಬಿಜೆಪಿ ಮುಡಾ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ದೆಹಲಿ ಯಜಮಾನರು ಹೇಳಿದಂತೆ ನಿರಂತರ ಅಪಪ್ರಚಾರ ನಡೆಸಿದರು. ಬಿಜೆಪಿ ಸುಳ್ಳು ಆರೋಪಗಳನ್ನು ಮಾಡಿ, ನಕಲಿ ಈಡಿ ದಾಳಿಗಳನ್ನು ಮಾಡಿಸಿತು ಮತ್ತು ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಂಡಿತು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ,

ಈ ಸಂಬಂಧ ಹೈಕೋರ್ಟ್ ಮತ್ತು ಈಗ ಸುಪ್ರೀಂ ಕೋರ್ಟ್ ಎರಡೂ ಬಿಜೆಪಿ ಸುಳ್ಳುಗಳನ್ನು ಬಹಿರಂಗಪಡಿಸಿವೆ. ಈಡಿ-ಬಿಜೆಪಿ ನಡುವಿನ ಸಂಬಂಧ ಮತ್ತು ಪಿತೂರಿ ಬಹಿರಂಗಗೊಂಡಿದ್ದು, ಬಿಜೆಪಿ ಹೂಡಿದ ಸಂಚು ಛಿದ್ರಗೊಂಡಿದೆ ಎಂದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News