×
Ad

ಕಲಬುರಗಿ| ಜು.4 ರಂದು ಚಿತ್ತಾಪುರ ತಾಲೂಕು ಪ್ರಜಾಸೌಧ ಉದ್ಘಾಟನೆ

Update: 2025-07-03 20:07 IST

ಕಲಬುರಗಿ: ಚಿತ್ತಾಪುರ ತಾಲೂಕು ಪ್ರಜಾಸೌಧ ಉದ್ಘಾಟನೆ ಹಾಗೂ ಫಲಾನುಭವಿಗಳ ಹಕ್ಕುಪತ್ರ ವಿತರಣಾ ಸಮಾರಂಭವು ಜುಲೈ 4 ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಚಿತ್ತಾಪುರ ತಾಲೂಕು ಪ್ರಜಾಸೌಧದಲ್ಲಿ ಜರುಗಲಿದೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಚಿತ್ತಾಪುರ ತಾಲೂಕು ಪ್ರಜಾಸೌಧವನ್ನು ಉದ್ಘಾಟಿಸಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವರು.

ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ರಾಜ್ಯದ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್, ಅಫಜಲಪುರ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಂ.ವೈ. ಪಾಟೀಲ, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ ಹಾಗೂ ಕರ್ನಾಟಕ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಅವರು ಗೌರವ ಉಪಸ್ಥಿತಿವಹಿಸುವರು.

ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ವಿಧಾನ ಪರಿಷತ್ ಶಾಸಕರುಗಳಾದ ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಸುನೀಲ್ ವಲ್ಲ್ಯಾಪುರೆ, ಡಾ. ಸಾಬಣ್ಣ ತಳವಾರ, ಶಶೀಲ ಜಿ. ನಮೋಶಿ, ತಿಮ್ಮಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಚಿತ್ತಾಪುರ ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ನಾಗಪ್ಪ ಕಲ್ಲಕ್ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಾರ್ಯಕ್ರಮದಲ್ಲಿ ಬೆಂಗಳೂರಿನ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ ಕಟಾರಿಯ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಬೆಂಗಳೂರು ಕಂದಾಯ ಆಯುಕ್ತಾಲಯದ ಅಯುಕ್ತ ಪೊಮ್ಮಲ್ ಸುನಿಲ ಕುಮಾರ ಹಾಗೂ ಬೆಂಗಳೂರು ಕರ್ನಾಟಕ ಗೃಹ ಮಂಡಳಿಯ ಆಯುಕ್ತ ಕೆ.ಎ. ದಯಾನಂದ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News