×
Ad

ತಾಡತೆಗನೂರ (ಕಲಬುರಗಿ-01) ಜವಾಹರ್‌ ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

Update: 2025-06-21 19:49 IST

ಕಲಬುರಗಿ: ತಾಡತೆಗನೂರ (ಕಲಬುರಗಿ-01) ಜವಾಹರ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿಗೆ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಡತೆಗನೂರ (ಕಲಬುರಗಿ-01) ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

ತಾಡತೆಗನೂರ ಜವಾಹರ ನವೋದಯ ವಿದ್ಯಾಲಯಕ್ಕೆ ಒಳಪಡುವ ತಾಲೂಕುಗಳಾದ ಆಳಂದ, ಅಫಜಲಪುರ, ಜೇವರ್ಗಿ, ಕಲಬುರಗಿ (ಉತ್ತರ) ಮತ್ತು ಕಲಬುರಗಿ (ದಕ್ಷಿಣ) ದಲ್ಲಿ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ವಿದ್ಯಾರ್ಥಿಗಳು https://navodaya.gov.in/NVS.html, https://cbseitms.rcil.gov.in/nvs?AspxAutoDetectCookieSupport=1 ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2025ರ ಜುಲೈ 29 ರೊಳಗಾಗಿ ಅರ್ಜಿ ಸಲ್ಲಿಸಬೇಕು. 2025ರ ಡಿಸೆಂಬರ್ 13 ರಂದು ಪರೀಕ್ಷೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ತಾಡತೆಗನೂರ (ಕಲಬುರಗಿ-01) ಪಿಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News