×
Ad

ಜೆಡಿಯು 'ಇಂಡಿಯಾ' ತೊರೆಯುವ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ: ಮಲ್ಲಿಕಾರ್ಜುನ ಖರ್ಗೆ

Update: 2024-01-27 14:48 IST

ಮಲ್ಲಿಕಾರ್ಜುನ ಖರ್ಗೆ | Photo: PTI 

ಕಲಬುರಗಿ, ಜ.27: ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿಯಬೇಕು ಎಂಬುದು ನಮ್ಮ ಅಪೇಕ್ಷೆ. ಹೀಗಾಗಿ, ಎಲ್ಲ ಪಕ್ಷಗಳೂ ಒಗ್ಗಟ್ಟಾಗಿರಬೇಕು. ಈ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಯುನವರು 'ಇಂಡಿಯಾ' ಒಕ್ಕೂಟವನ್ನು ತೊರೆಯುವ ಬಗ್ಗೆ ನಮಗೆ ಯಾವ ಮಾಹಿತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

ಮೈತ್ರಿಕೂಟ ಒಗ್ಗಟ್ಟು ಕಾಯ್ದುಕೊಳ್ಳುವ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲರಿಗೂ ಪತ್ರ ಬರೆದಿದ್ದೇನೆ. ಹೀಗಾಗಿ ಆ ವಿಚಾರದ ಬಗ್ಗೆ ಈಗ ಹೇಳಿಕೆ ಕೊಟ್ಟರೆ ಗೊಂದಲ ಆಗುತ್ತದೆ ಎಂದರು.

ಜ.28(ರವಿವಾರ)ರಂದು ಡೆಹ್ರಾಡೂನ್ ನಲ್ಲಿ ಪಕ್ಷದ ಸಭೆ ನಡೆಯಲಿದೆ. ಆ ಬಳಿಕ ದಿಲ್ಲಿಗೆ ತೆರಳಿ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆಯುವೆ ಎಂದು ಖರ್ಗೆ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News