ಜೇವರ್ಗಿ: ತಾಲೂಕಿನ ಕಾಸರಬೋಸಗಾ ಗ್ರಾಮದ ರೈತ ಶಿವಶರಣಪ್ಪ ಗುರುಬಸಪ್ಪ ಕೋರಿ ಅವರು ಬೆಳೆದಿದ್ದ ಸುಮಾರು 10 ಲಕ್ಷ ರೂ. ಮೌಲ್ಯದ ಹತ್ತಿ ಬೆಂಕಿಗಾಹುತಿಯಾದ ಘಟನಾ ಸ್ಥಳಕ್ಕೆ ಬುಧವಾರ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ನೇತೃತ್ವದ ಬಿಜೆಪಿ ಮುಖಂಡರು ಭೇಟಿ ನೀಡಿದರು.

ಈ ವೇಳೆ ನೊಂದ ರೈತ ಶಿವಶರಣಪ್ಪ ಕೋರಿ ಅವರಿಗೆ ಧೈರ್ಯ ತುಂಬಿದ ಮುಖಂಡರು, ಬಳಿಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಘಟನೆಯ ಕುರಿತು ಮಾಹಿತಿ ಪಡೆದರು.

ಹತ್ತಿಗೆ ಬೆಂಕಿ ಹಚ್ಚಿರುವ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಬೇಕು. ಕೃತ್ಯ ಎಸಗಿದ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ಬಂಧಿಸಬೇಕು. ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಶಿವರಾಜ ಪಾಟೀಲ, ಶಿವರಾಜ್ ಪಾಟೀಲ್ ರದ್ದೇವಾಡ್ಗಿ, ಶೋಭಾ ಭರಣಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ