×
Ad

ಜೇವರ್ಗಿ | ಹಿಂಗಾರು ಬೆಳೆ ಸಮಿಕ್ಷೆ ನಡೆಸಿ ಪಹಣಿಯಲ್ಲಿ ನೋಂದಾಯಿಸುವಂತೆ ಆಗ್ರಹ

Update: 2026-01-02 20:44 IST

ಜೇವರ್ಗಿ : ಹಿಂಗಾರು ಬೆಳೆಗಳ ಸಮೀಕ್ಷೆ ನಡೆಸಿ ರೈತರ ಪಹಣಿಯಲ್ಲಿ ಕೂಡಲೇ ನೋಂದಣಿ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಕಲ್ಯಾಣ ಕರ್ನಾಟಕ ವಿಭಾಗ ಸಂಚಾಲಕರಾದ ರಾಜಶೇಖರ ಚವಡಿ ಆಗ್ರಹಿಸಿದರು.

ಈ ಸಂಬಂಧ ಜೇವರ್ಗಿಯ ಕೃಷಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ತಾಲೂಕಿನಾದ್ಯಂತ ಮುಂಗಾರು ಬೆಳೆ ಅತಿಯಾದ ಮಳೆಯಿಂದಾಗಿ ಸಂಪೂರ್ಣವಾಗಿ ನಾಶವಾಗಿದೆ. ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಇದೀಗ ತಮ್ಮ ಜಮೀನಿನಲ್ಲಿ ಹಿಂಗಾರು ಬೆಳೆ ಬೆಳೆಸುತ್ತಿದ್ದಾರೆ. ಆದರೆ ಹಿಂಗಾರು ಬೆಳೆಗಳ ಸಮೀಕ್ಷೆ ನಡೆಸಿ ಪಹಣಿಯಲ್ಲಿ ನೋಂದಣಿ ಮಾಡುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇದರಿಂದ ರೈತರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಕೂಡಲೇ ಹಿಂಗಾರು ಬೆಳೆ ಸಮೀಕ್ಷೆ ನಡೆಸಿ ಪಹಣಿಯಲ್ಲಿ ನೋಂದಣಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ವಿಳಂಬವಿಲ್ಲದೆ ಸಮೀಕ್ಷೆ ಪೂರ್ಣಗೊಳಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಸೇನೆ ಜಿಲ್ಲಾ ಕಾರ್ಯಾಧ್ಯಕ್ಷ ಸಂತೋಷಗೌಡ ಮಾಲಿ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ರಮೇಶ ಹವಲ್ದಾರ, ಸಂಚಾಲಕ ವಿಶ್ವನಾಥ ದೊರೆ, ಜೇವರ್ಗಿ ತಾಲೂಕ ಖಜಾಂಚಿ ಮಲ್ಲಣ್ಣಗೌಡ ಹಳ್ಳಿ ಸೇರಿದಂತೆ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News