×
Ad

ಜೇವರ್ಗಿ | ರಾಜ್ಯ ಮಟ್ಟದ ವಿಜ್ಞಾನ ಪ್ರದರ್ಶನದಲ್ಲಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಶಾಲೆಯ ಮಕ್ಕಳ ಉತ್ತಮ ಸಾಧನೆ

Update: 2026-01-13 18:15 IST

ಜೇವರ್ಗಿ: ಧಾರವಾಡದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ವಿಜ್ಞಾನ ಪ್ರದರ್ಶನದಲ್ಲಿ ಪಟ್ಟಣದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲಾ ವತಿಯಿಂದ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಮಸ್ಕಾನ್ ಮೊಹಮ್ಮದ್, ಸೈಯದಾ ಝೋಯಾ ತೈಬಾ ಸಾದಿಖಾ, ಅಬ್ದುಲ್ ಅಜೀಜ್, ಪ್ರಿಯಾಂಕಾ ಸೋಮಶೇಖರ್ ಹಾಗೂ ಹಸ್ನೈನ್ ಅವರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ಶಾಲೆ ಮತ್ತು ತಾಲೂಕಿಗೆ ಕೀರ್ತಿ ತಂದಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲಾ ಆಡಳಿತಾಧಿಕಾರಿ ಮೊಹಮ್ಮದ್ ಅಹ್ತೇಶಾಮ್ ಉಲ್ ಹಸನ್ ಅವರು, ವಿದ್ಯಾರ್ಥಿಗಳ ಈ ಯಶಸ್ಸು ಶಿಕ್ಷಕರು ಹಾಗೂ ಪೋಷಕರ ಸಂಯುಕ್ತ ಶ್ರಮದ ಫಲವಾಗಿದೆ. ಮುಂದಿನ ದಿನಗಳಲ್ಲಿ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸಲು ಇನ್ನಷ್ಟು ಹೆಚ್ಚಿನ ಉತ್ತೇಜನ ನೀಡಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಅಭಿನಂದನಾ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ, ಹೂಮಾಲೆ ಹಾಕಿ ಅದ್ಧೂರಿಯಾಗಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷ ಇಬ್ರಾಹಿಂ ಪಟೇಲ್, ಮುಖ್ಯ ಶಿಕ್ಷಕಿ ಶಿರಿನ್ ಬುಷ್ರಾ, ಅಬ್ದುಲ್ ರಹ್ಮಾನ್ ಪಟೇಲ್, ಅಬ್ದುಲ್ ಮಾಜಿದ್ ಸರ್, ಪುರಸಭೆ ಸದಸ್ಯ ಮುಹಮ್ಮದ್ ಗೌಸ್ ಸಾಹೇಬ್ ಹಾಗೂ ಸೈಯದ್ ಝಮೀರ್ ಹುಸೇನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮುಹಮ್ಮದ್ ಗೌಸ್ ಇನಾಮ್ದಾರ್, ಮೌಲಾನಾ ಮುಫ್ತಿ ಅಬ್ದುಲ್ ಮಜೀದ್, ಅಹ್ಮದ್ ಹುಸೇನ್ ಬಾಗಬಾನ್ ಸೇರಿದಂತೆ ಅನೇಕ ಶಿಕ್ಷಣ ಪ್ರೇಮಿಗಳು, ಪೋಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡು ವಿಜೇತರಿಗೆ ಶುಭ ಹಾರೈಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News