ಜೇವರ್ಗಿ | ಭೀಕರ ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Update: 2026-05-21 16:55 IST
ಲಕ್ಷ್ಮಿಕಾಂತ್
ಜೇವರ್ಗಿ: ಪಟ್ಟಣದ ರಿಲಯನ್ಸ್ ಪೆಟ್ರೋಲ್ ಬಂಕ್ ಎದುರು ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಜೇವರ್ಗಿ ತಾಲ್ಲೂಕಿನ ಕಟ್ಟಿಸಂಗಾವಿ ಗ್ರಾಮದ ನಿವಾಸಿ ಲಕ್ಷ್ಮಿಕಾಂತ್ ಎಂದು ಗುರುತಿಸಲಾಗಿದೆ.
ಐಶರ್ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಢಿಕ್ಕಿಯ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಾಹನ ಸಂಚಾರದಲ್ಲೂ ಅಡಚಣೆ ಉಂಟಾಯಿತು.