×
Ad

ಕಲಬುರಗಿ: ಜೇವರ್ಗಿ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ

Update: 2025-02-26 23:14 IST

ಕಲಬುರಗಿ: ಇತ್ತೀಚೆಗೆ ನಡೆದ ಜೇವರ್ಗಿ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಕಲಬುರಗಿ ಹೈಕೋರ್ಟ್‌ ನ್ಯಾಯಪೀಠವು ತಡೆಯಾಜ್ಞೆ ನೀಡಿ ಮಂಗಳವಾರ ಆದೇಶ ಹೊರಡಿಸಿದೆ.

ಕಳೆದ ಫೆ. 12ರಂದು ನಡೆದ ಜೇವರ್ಗಿ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆ ಆಯ್ಕೆ ಚುನಾವಣೆಯಲ್ಲಿ ಮತದಾನಕ್ಕೆ ಆಗಮಿಸಿದ ಬಿಜೆಪಿ ಬೆಂಬಲಿಗರಿಬ್ಬರಿಗೆ ಮತದಾನಕ್ಕೆ ಅವಕಾಶ ನೀಡಿ ಪೊಲೀಸ್ ಅಧಿಕಾರಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡರು ಮತ್ತು ಪುರಸಭೆ ಸದಸ್ಯರು ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ಪರಾಜಿತಗೊಂಡಿರುವ ಗುಂಡು ಸಾಹು ಗೋಗಿ, ಉಪಾಧ್ಯಕ್ಷೆ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾವ್ಯ ಶಹಾಬಾದಕರ್ ಮತ್ತು ಸದಸ್ಯರಾದ ಮುಮ್ರಾಜ ಬೇಗಂ ಹಾಗೂ ಶಿವುಬಾಯಿ ಕೊಂಬಿನ್ ಎನ್ನುವರು ಹೈಕೋರ್ಟನಲ್ಲಿ ಮುಕ್ತವಾಗಿ ಚುನಾವಣೆ ನಡೆದಿಲ್ಲ ಎಂದು ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದರು.

ಕಲಬುರಗಿ ಹೈಕೋರ್ಟ್ ನ್ಯಾಯ ಪೀಠವು ಜೇವರ್ಗಿ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಗೆ ತಡೆಯಾಜ್ಞೆ ನೀಡಿ ಮಂಗಳವಾರ ಆದೇಶ ಹೊರಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News